ಇತ್ತೀಚಿನ ಸುದ್ದಿ
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಮತ್ತೆ ಆಸ್ಪತ್ರೆಗೆ ದಾಖಲು
18/05/2021, 10:00
ಬೆಂಗಳೂರು(reporterkarnataka news): ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ನಾಡೋಜ ಡಾ. ಎಚ್. ಎಸ್. ದೊರೆಸ್ವಾಮಿ ಮತ್ತೆ ಅಸ್ವಸ್ಥರಾಗಿದ್ದು, ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇತ್ತೀಚೆಗೆ ಕೊರೊನಾ ಸೋಂಕಿಗೆ ಒಳಗಾದ ದೊರೆಸ್ವಾಮಿ ಅವರು ಉಸಿರಾಟ ಸಮಸ್ಯೆಯಿಂದ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಯ ಬಳಿಕ ಚೇತರಿಸಿಕೊಂಡ ಅವರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದರು. ಆದರೆ ನಿಶಕ್ತಿ ಹಾಗೂ ದೈಹಿಕ ಅಸ್ವಸ್ಥತೆಯಿಂದ ಅವರನ್ನು ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ದೊರೆಸ್ವಾಮಿ ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಆಸ್ಪತ್ರೆಯ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್ ತಿಳಿಸಿದ್ದಾರೆ.