2:28 AM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಹಿರಿಯಡ್ಕ: ದನದ ಕೊಟ್ಟಿಗೆಯಲ್ಲಿ ಬೆಂಕಿ‌ ಅವಘಡ; ಮನನೊಂದ ವ್ಯಕ್ತಿ‌ ನೇಣಿಗೆ ಶರಣು

14/12/2022, 11:56

ಹಿರಿಯಡ್ಕ(reporterkarnataka.com): ಮನೆಯಲ್ಲಿ ನಡೆದ ಬೆಂಕಿ ಅವಘಡದಿಂದ ಚಿಂತೆಗೀಡಾಗಿದ್ದ ವ್ಯಕ್ತಿಯೊಬ್ಬರು ಮನನೊಂದು‌ ಆತ್ಮಹತ್ಯೆಗೆ ಶರಣಾದ ಘಟನೆ ಬೊಮ್ಮರಬೆಟ್ಟು ಗ್ರಾಮದ ಕೊಲ್ಯಾರು‌ ಎಂಬಲ್ಲಿ‌ ನಡೆದಿದೆ.

ಬೊಮ್ಮರಬೆಟ್ಟು ಗ್ರಾಮದ ಕೊಲ್ಯಾರು‌ ನಿವಾಸಿ ಶಾಂತೇಶ್ ಶೆಟ್ಟಿ(59) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಡಿ.9ರಂದು ಇವರ ಮನೆಯ ಬಳಿಯ ದನದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಹೋಗಿತ್ತು. ಇದರಿಂದ ಕೊಟ್ಟಿಗೆಯಲ್ಲಿದ್ದ ತೆಂಗಿನಕಾಯಿ ಹಾಗೂ ಬೈಹುಲ್ಲು ಸಂಪೂರ್ಣ ಸುಟ್ಟು ಕರಕಲಾಗಿತ್ತು. ಈ ವಿಚಾರದಲ್ಲಿ ಮಾನಸಿಕವಾಗಿ ನೊಂದ ಶಾಂತೇಶ್ ಶೆಟ್ಟಿ ಅವರು ಡಿ. 11ರ ರಾತ್ರಿ 10‌ಗಂಟೆಯಿಂದ ಡಿ. 12ರ‌ ಬೆಳಿಗ್ಗಿನ ಮಧ್ಯಾವಧಿಯಲ್ಲಿ ಮನೆಯ ಹಿಂಬದಿಯಲ್ಲಿರುವ ಹಲಸಿನ ಮರದ ಕೊಂಬೆಗೆ‌ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು