ಇತ್ತೀಚಿನ ಸುದ್ದಿ
ಹಿರಿಯೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ವೇತನ ಹೆಚ್ಚಿಸುವಂತೆ ತಾಲ್ಲೂಕು ರೈತ ಸಂಘದಿಂದ ಸಚಿವರಿಗೆ ಮನವಿ
02/12/2021, 09:50
ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ
info.reporterkarnataka@gmail.com
ಹಿರಿಯೂರು ಪ್ರತಿ ಅಂಗನವಾಡಿ ವ್ಯಾಪ್ತಿಯಲ್ಲಿ 30 ಕ್ಕೂ ಹೆಚ್ಚು ಮಕ್ಕಳು ಹಾಗೂ ಗರ್ಭಿಣಿ ಸ್ತ್ರೀಯರು ಇದ್ದು, ಇವರ ಆರೋಗ್ಯದ ಬಗ್ಗೆ ಹೆಚ್ಚು ಒತ್ತು ಕೊಟ್ಟು ಕೆಲಸ ನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರನ್ನು ಸರ್ಕಾರಿ ನೌಕರರಾಗಿ ಪರಿಗಣಿಸಬೇಕು ಎಂಬುದಾಗಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಅಧ್ಯಕ್ಷ ಕೆ.ಟಿ.ತಿಪ್ಪೇಸ್ವಾಮಿ ಒತ್ತಾಯಿಸಿದರು.
ನಗರದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಆವರಣದಲ್ಲಿ ಹಿರಿಯೂರು ತಾಲ್ಲೂಕು ರೈತ ಸಂಘದ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ವೇತನ ಹೆಚ್ಚಿಸುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಅಧಿಕಾರಿಗಳ ಮುಖಾಂತರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವರಾದ ಶಶಿಕಲಾ ಜೊಲ್ಲೆ ಅವರಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.
ಗ್ರಾಮೀಣ ಭಾಗದ ಶಾಲೆಗಳಲ್ಲಿ ಕೇವಲ 10ರಿಂದ 12 ಮಕ್ಕಳಿಗೆ ಒಬ್ಬ ಶಿಕ್ಷಕರಿದ್ದು, ಅವರಿಗೆ ಸರ್ಕಾರಿ ನೌಕರಿಯಲ್ಲಿ 30ರಿಂದ 40 ಸಾವಿರ ವೇತನ ಕೊಡುತ್ತಿದ್ದಾರೆ. ಆದರೆ ಅಂಗನವಾಡಿಯಲ್ಲಿ 25 ರಿಂದ 30 ಕ್ಕೂ ಹೆಚ್ಚು ಮಕ್ಕಳು ಗರ್ಭಿಣಿಯರಿಗೂ ಮತ್ತು ಗ್ರಾಮದ ಎಲ್ಲಾ ಆರೋಗ್ಯ ಮಾರ್ಗದರ್ಶಕರಾಗಿರುವ ಇವರುಗಳಿಗೆ ಕನಿಷ್ಠ ವೇತನ ಕೊಡುತ್ತಿದ್ದು, ಇನ್ನು ಮುಂದೆ ಇವರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಿ ಹೆಚ್ಚು ವೇತನ ಕೊಡಿಸಬೇಕು ಎಂಬುದಾಗಿ ಅವರು ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ತಾಲ್ಲೂಕು ರೈತಸಂಘದ ಮುಖಂಡರುಗಳಾದ ಕೆ.ಎನ್.ತಿಮ್ಮಣ್ಣ, ವೈ.ಶಿವಣ್ಣ, ಹೆಚ್.ವಿ.ವೀರಣ್ಣಗೌಡ, ರಂಗನಾಥ್, ಎ.ವಿರುಪಾಕ್ಷಪ್ಪ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.