ಇತ್ತೀಚಿನ ಸುದ್ದಿ
ಗೋಣಿಕೊಪ್ಪಲು ಸಮೀಪದ ಕೈಕೇರಿ ಬಳಿ ಹಿಟ್ ಅಂಡ್ ರನ್ ಕೇಸ್: ಅಪರಿಚಿತ ವ್ಯಕ್ತಿ ಸಾವು
24/11/2025, 14:44
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಗೋಣಿಕೊಪ್ಪಲು ವಿರಾಜಪೇಟೆಯ ಮುಖ್ಯ ರಸ್ತೆ ಕೈಕೇರಿ ಬಳಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಅಪರಿಚಿತ ಪಾದಚಾರಿಗೆ ವಾಹನ ಡಿಕ್ಕಿಹೊಡೆದ ಪರಿಣಾಮ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ.
ತಲೆ ಹಾಗೂ ಎದೆ ಭಾಗಕ್ಕೆ ತೀವ್ರ ಸ್ವರೂಪದ ಗಾಯಗಳು ಉಂಟಾಗಿ ಮೃತಪಟ್ಟಿದ್ದಾರೆ ಎಂದು ಗೋಣಿಕೊಪ್ಪಲು ಆಸ್ಪತ್ರೆಯ ವೈದ್ಯಧಿಕಾರಿಗಳು ದೃಢಪಡಿಸಿದ್ದಾರೆ. ಅಂದಾಜು 55 ವರ್ಷಪ್ರಾಯದ ಕೂಲಿ ಕಾರ್ಮಿಕ ಎಂದು ಗುರುತಿಸಲಾಗಿದ್ದು ಇವರ ಪರಿಚಯ ಇರುವವರು, ಹಾಗೂ ಕುಟುಂಬಸ್ಥರು ಗೋಣಿಕೊಪ್ಪಲು ಪೊಲೀಸ್ ಠಾಣೆ ಅಥವಾ ಗೋಣಿಕೊಪ್ಪಲು ಆಸ್ಪತ್ರೆಯಲ್ಲಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.












