11:26 AM Sunday18 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.…

ಇತ್ತೀಚಿನ ಸುದ್ದಿ

ಎಚ್ ಎಂಪಿವಿ ವೈರಸ್ ಬಗ್ಗೆ ಭಯ ಬೇಡ: ಮುಖ್ಯಮಂತ್ರಿ ಸಿದ್ದರಾಮಯ್ಯ‌ ಅಭಯ

08/01/2025, 17:07

ಬೆಂಗಳೂರು(reporterkarnataka.com): ಎಚ್ ಎಂ.ಪಿ. ವೈರಾಣು ಬಗ್ಗೆ ಸಾರ್ವಜನಿಕರು ಭಯಪಡಬೇಕಾದ ಅಗತ್ಯವಿಲ್ಲ. ಜಾಗರೂಕರಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಈಗಾಗಲೇ ಆರೋಗ್ಯ ಇಲಾಖೆಯವರು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ಗಾಂಧಿ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಎಚ್ ಎಂ.ಪಿ.ವಿ ಬಗ್ಗೆ ಇಂದು ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಚರ್ಚಿಸಲಾಗಿದ್ದು, ಇದು ಆತಂಕಾರಿಯಾದ ವೈರಸ್ ಅಲ್ಲ ಹಾಗೂ ಅದು ಚೀನಾದಿಂದ ಬಂದಿಲ್ಲ. 2001 ರಿಂದಲೇ ಈ ವೈರಾಣು ಪತ್ತೆಯಾಗಿದ್ದು, ಎಚ್.ಎಂ.ಪಿ ವೈರಸ್ ಮಕ್ಕಳಿಗೆ, ವಯಸ್ಸಾದವರಿಗೆ ಹಾಗೂ ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಿಗೆ ಹೆಚ್ಚಾಗಿ ತಗಲುತ್ತದೆ. ಆದರೆ ಅದು ಅಪಾಯಕಾರಿಯಲ್ಲ ಎಂದು ತಜ್ಞರು ತಿಳಿಸಿದ್ದಾರೆ.ಆದ್ರೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವುದು ಉತ್ತಮ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಗೃಹ ಸಚಿವ ಜಿ.ಪರಮೇಶ್ವರ ಅವರು ಏರ್ಪಡಿಸಿದ್ದ ಔತಣಕೂಟ ರದ್ದಾಗಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಈ ಬಗ್ಗೆ ಗೊತ್ತಿಲ್ಲ ಎಂದರು.
ಔತಣ ಕೂಟ ಕರೆದಿರುವುದಾಗಲಿ ಅಥವಾ ರದ್ದಾಗಿರುವುದಾಗಲಿ ನನಗೆ ತಿಳಿದಿಲ್ಲ. ಅವರೊಂದಿಗೆ ಮಾತನಾಡುವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು