6:10 PM Saturday15 - March 2025
ಬ್ರೇಕಿಂಗ್ ನ್ಯೂಸ್
PWD Minister | ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಆಗಮನ-ನಿರ್ಗಮನ ಮಾರ್ಗ ಮುಚ್ಚಿಲ್ಲ:… Home Minister | ರಾಜ್ಯದ ಎಲ್ಲ ಪೊಲೀಸ್ ಸಿಬ್ಬಂದಿಗಳಿಗೆ ಸೈಬರ್ ತರಬೇತಿ: ಗೃಹ… Forest Minister | ಬೇಲೂರು ಬಳಿ ಕಾಡಾನೆ ದಾಳಿಗೆ ಮಹಿಳೆ ಸಾವು; 3… ಗುಣಮಟ್ಟದ ಕಾನೂನು ಶಿಕ್ಷಣ ಅಗತ್ಯ: ವಿಶ್ರಾಂತ ಮುಖ್ಯ ನ್ಯಾಯಮೂರ್ತಿಗಳಾದ ಎಂ.ಎನ್.ವೆಂಕಟಾಚಲಯ್ಯ ಪ್ರತಿಪಾದನೆ ತೀರ್ಥಹಳ್ಳಿ: ಮಸೀದಿ ಬಳಿ ನಿಲ್ಲಿಸಿದ್ದ ವಾಹನ ಅಪಹರಿಸಿದ ಖದೀಮರು; 30 ಲಕ್ಷ ರೂ.… ವಿಧಾನ ಸಭೆ ಉಪ ಸಭಾಪತಿ ರುದ್ರಪ್ಪ ಲಮಾಣಿಗೆ ಅಪಘಾತ: ದೂರವಾಣಿ ಕರೆ ಮಾಡಿ… VV Shutdown | ವಿವಿ ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ; ಬಿಜೆಪಿಗೆ ಆತಂಕ… ಮಾತು ಉಳಿಸಿಕೊಂಡ ಸಿದ್ದರಾಮಯ್ಯ ಸರಕಾರ; ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ: ಸಚಿವೆ ಲಕ್ಷ್ಮೀ… ನಟ ಅನಂತನಾಗ್ ದಂಪತಿಯ ಭೇಟಿಯಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ; ಮಾಜಿ ಡಿಸಿಎಂ… Ex CM | ಸ್ವಾತಿ ಹತ್ಯೆ ಹಿಂದೆ ಲವ್ ಜಿಹಾದ್ ಜಾಲ ಸಕ್ರೀಯ:…

ಇತ್ತೀಚಿನ ಸುದ್ದಿ

Home Minister | ರಾಜ್ಯದ ಎಲ್ಲ ಪೊಲೀಸ್ ಸಿಬ್ಬಂದಿಗಳಿಗೆ ಸೈಬರ್ ತರಬೇತಿ: ಗೃಹ ಸಚಿವ ಡಾ. ಜಿ. ಪರಮೇಶ್ವರ್

15/03/2025, 16:52

ಬೆಂಗಳೂರು(reporter Karnataka.com): ರಾಜ್ಯದ ಪ್ರತಿಯೊಬ್ಬ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸೈಬರ್ ಅಪರಾಧಗಳ ಕುರಿತು ಹೆಚ್ಚಿನ ಅರಿವು ಮತ್ತು ತರಬೇತಿ ನೀಡಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.
ಸಿಐಡಿ ಹಾಗೂ ಸೈಬರ್ ಕ್ರೈಮ್ ತನಿಖಾ ತರಬೇತಿ ಮತ್ತು ಸಂಶೋಧನಾ ಕೇಂದ್ರ ವತಿಯಿಂದ ನಗರದ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ “CIDECODE” ಸೈಬರ್ ಅಪರಾಧ ಶೃಂಗಸಭೆ-2025 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಸೈಬರ್ ಅಪರಾಧಗಳಿಗೆ ಯಾವುದೇ ರೀತಿಯ ಇತಿಮಿತಿಗಳಿಲ್ಲ. ಪ್ರಪಂಚದಲ್ಲಿ ಆಗುತ್ತಿರುವ ಸೈಬರ್ ಅಪರಾಧಗಳ ಕುರಿತು ಅರಿವು ಮೂಡಿಸಬೇಕು ಎಂಬ ಉದ್ದೇಶದಿಂದ ಸಿಸಿಐಟಿಆರ್ ಸ್ಥಾಪಿಸಲಾಗಿದೆ. ಈವರೆಗೆ 46 ಸಾವಿರಕ್ಕು ಹೆಚ್ಚು ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ತರಬೇತಿ ನೀಡಲಾಗಿದೆ ಎಂದು ತಿಳಿಸಿದರು.
2023ರಲ್ಲಿ 22 ಸಾವಿರ ಸೈಬರ್ ಅಪರಾಧ ಪ್ರಕರಣಗಳು ದಾಖಲಾಗಿದ್ದವು. ಬ್ಯಾಂಕ್ ಅಕೌಂಟ್, ಡೇಟಾ ಹ್ಯಾಕ್, ಸರ್ಕಾರಿ ಖಾತೆಗಳು ಹ್ಯಾಕ್‌ ಆಗುವುದು ಸೇರಿದಂತೆ ನಾನಾ ರೀತಿಯ ಸೈಬರ್ ಅಪರಾಧಗಳು ಆಗುತ್ತಿವೆ. ಇದನ್ನು ತಡೆಗಟ್ಟದೆ ಹೋದರೆ ಮುಂದಿನ ದಿನಗಳಲ್ಲಿ ತೊಂದರೆಗಳಾಗುತ್ತವೆ. ಸಾಮಾನ್ಯ ಅಪರಾಧಗಳಿಗಿಂತ ಸೈಬರ್ ಕ್ರೈಂ ಹೆಚ್ಚಾಗುತ್ತಿವೆ ಎಂದು ಹೇಳಿದರು.
ಬೆಂಗಳೂರು ನಗರದಲ್ಲಿ ದಾಖಲಾಗುತ್ತಿರುವ ಸಾಮಾನ್ಯ ಅಪರಾಧಗಳಲ್ಲಿ ಶೇ. 30ರಷ್ಟು ಸೈಬರ್ ಅಪರಾಧಗಳು ದಾಖಲಾಗುತ್ತಿವೆ. ವೈಟ್‌ಫೀಲ್ಡ್ ವಿಭಾಗದ ವ್ಯಾಪ್ತಿಯಲ್ಲಿ ಶೇ.40ರಷ್ಟು ಸೈಬರ್ ಅಪರಾಧ ಪ್ರಕರಣಗಳು ದಾಖಲಾಗುತ್ತಿವೆ. ಇದು ಇನ್ನು ಹೆಚ್ಚಾಗುವ ಸಾಧ್ಯತೆ ಇದೆ. ಆರಂಭಿಕ ಹಂತದಲ್ಲೆ ಹೆಚ್ಚು ಫೋಕಸ್ ಮಾಡಿ ತಡೆಗಟ್ಟಲು ಅಗತ್ಯ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಕಾನೂನು ಸುವ್ಯವಸ್ಥೆಯನ್ನು ಬಲಪಡಿಸಲು ತಂತ್ರಜ್ಞಾನ ಮತ್ತು ತರಬೇತಿಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ಜಾಗತಿಕವಾಗಿ ಸೈಬರ್ ಅಪರಾಧಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇದನ್ನು ತಡೆಗಟ್ಟಲು ತಾಂತ್ರಿಕ ಬಲವರ್ಧನೆಯನ್ನು ಹೆಚ್ಚಿಸಿಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಸಿಐಡಿ ಡಿಕೋಡ್ ಶೃಂಗಸಭೆಯು ಸಹಕಾರಿಯಾಗಲಿದೆ. ಹ್ಯಾಕಥಾನ್ ಮತ್ತು ಸೈಬರ್ ಲಾ ಐಡಿಯಾಥಾನ್‌ನಂತಹ ಕಾರ್ಯಕ್ರಮಗಳು ಸುರಕ್ಷಿತ ಡಿಜಿಟಲ್ ಕರ್ನಾಟಕ ಮತ್ತು ಸುರಕ್ಷಿತ ಭಾರತವನ್ನು ನಿರ್ಮಿಸುವ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ಕೇಂದ್ರ ತನಿಖಾ ಇಲಾಖೆ (ಸಿಐಡಿ) ಆಯೋಜಿಸಿದ್ದ ಹ್ಯಾಕಥಾನ್ ಮತ್ತು ಸೈಬರ್ ಲಾ ಐಡಿಯಾಥಾನ್‌ಗಳಲ್ಲಿ ಭಾಗವಹಿಸಿ, ಡೀಪ್ ಫೇಕ್ ಪತ್ತೆ, ಬ್ಲಾಕ್ ಚೈನ್ ತಂತ್ರಜ್ಞಾನ ಬಳಕೆ ಸೇರಿದಂತೆ ಇನ್ನಿತರ ಸೈಬರ್ ಅಪರಾಧಗಳಿಗೆ ಸಮಸ್ಯೆಗಳನ್ನು ಬಗೆಹರಿಸಲು ತಂತ್ರಾಂಶಗಳನ್ನು ಅಭಿವೃದ್ಧಿಪಡಿಸುವ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಗೃಹ ಸಚಿವ ಜಿ.ಪರಮೇಶ್ವರ ಅವರು ಬಹುಮಾನ ನೀಡಿ ಅಭಿನಂದಿಸಿದರು.
ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ ಮೋಹನ್, ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್, ಸಿಐಡಿ ಡಿಜಿಪಿ ಡಾ. ಎಂ.ಎ.ಸಲೀಂ, ಸೈಬರ್ ಕ್ರೈಂ ಮತ್ತು ನಾರ್ಕೋಟಿಕ್ ವಿಭಾಗದ ಡಿಜಿಪಿ ಪ್ರಣವ್ ಮೊಹಾಂತಿ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ್, ಡೇಟಾ ಸೆಕ್ಯೂರಿಟಿ ಕೌನ್ಸಿಲ್ ಆಫ್ ಇಂಡಿಯಾ ಸಿಇಒ ವಿನಾಯಕ ಗೋಡ್ಸೆ, ಇನ್ಫೋಸಿಸ್ ಸಂಸ್ಥೆಯ ಟ್ರಸ್ಟಿ ಸುನೀಲ್ ಕುಮಾರ್ ಧಾರೇಶ್ವರ್ ಅವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು