ಇತ್ತೀಚಿನ ಸುದ್ದಿ
ಗೃಹ ಸಚಿವ ಡಾ. ಜಿ. ಪರಮೇಶ್ವರ್ ಜುಲೈ 8ರಂದು ಮಂಗಳೂರಿಗೆ; 9ರಂದು ಶಾಂತಿ ಸೌಹಾರ್ದತೆ ಸಭೆ
07/07/2025, 22:12

ಮಂಗಳೂರು(reporterkarnataka.com): ಗೃಹ ಸಚಿವ ಡಾ.ಜಿ ಪರಮೇಶ್ವರ ಅವರು ಜುಲೈ 8 ಮತ್ತು 9ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಜುಲೈ 8ರಂದು ಬೆಳಿಗ್ಗೆ 6:30 – ಮಂಗಳೂರು ವಿಮಾನ ನಿಲ್ದಾಣ ಆಗಮನ, ವಾಸ್ತವ್ಯ, ಜುಲೈ 9ರಂದು ಮಧ್ಯಾಹ್ನ 12 ರಿಂದ 3ರವರೆಗೆ – ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲೆಯ ಶಾಂತಿ ಸೌಹಾರ್ದತೆಯನ್ನು ಕಾಪಾಡುವ ಹಿತ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ರಾಜಕೀಯ ಪಕ್ಷದ ಮುಖಂಡರು, ವಿವಿಧ ಸಂಘ ಸಂಸ್ಥೆಗಳ ( ಶಿಕ್ಷಣ ಮತ್ತು ಧಾರ್ಮಿಕ) ಪ್ರತಿನಿಧಿಗಳು ಹಾಗೂ ಎಲ್ಲಾ ಸಮುದಾಯದ ಮುಖಂಡರುಗಳೊಂದಿಗೆ ಆಯೋಜಿಸಿರುವ ಸಭೆಯಲ್ಲಿ ಸಚಿವರು ಭಾಗವಹಿಸಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸೌಹಾರ್ದತೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಜುಲೈ 9ರಂದು ಮಧ್ಯಾಹ್ನ 12 ಗಂಟೆಗೆ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರ ಉಪಸ್ಥಿತಿಯಲ್ಲಿ, ಗೃಹ ಸಚಿವ ಡಾ.ಜಿ.ಪರಮೇಶ್ವರ ಅಧ್ಯಕ್ಷತೆಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉಪಸ್ಥಿತಿಯಲ್ಲಿ ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಎಲ್ಲಾ ರಾಜಕೀಯ ಪಕ್ಷದ ಮುಖಂಡರು, ವಿವಿಧ ಸಂಘ ಸಂಸ್ಥೆಗಳು/ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು, ಎಲ್ಲಾ ಧಾರ್ಮಿಕ ಸಂಸ್ಥೆಗಳ ಹಾಗೂ ಎಲ್ಲಾ ಸಮುದಾಯದ ಮುಖಂಡರುಗಳೊಂದಿಗೆ ಸಭೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣ ಆಯೋಜಿಸಲಾಗಿದೆ.