11:00 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಗೃಹ ಸಚಿವ ಡಾ. ಜಿ. ಪರಮೇಶ್ವರ್ ಜುಲೈ 8ರಂದು ಮಂಗಳೂರಿಗೆ; 9ರಂದು ಶಾಂತಿ ಸೌಹಾರ್ದತೆ ಸಭೆ

07/07/2025, 22:12

ಮಂಗಳೂರು(reporterkarnataka.com): ಗೃಹ ಸಚಿವ ಡಾ.ಜಿ ಪರಮೇಶ್ವರ ಅವರು ಜುಲೈ 8 ಮತ್ತು 9ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಜುಲೈ 8ರಂದು ಬೆಳಿಗ್ಗೆ 6:30 – ಮಂಗಳೂರು ವಿಮಾನ ನಿಲ್ದಾಣ ಆಗಮನ, ವಾಸ್ತವ್ಯ, ಜುಲೈ 9ರಂದು ಮಧ್ಯಾಹ್ನ 12 ರಿಂದ 3ರವರೆಗೆ – ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲೆಯ ಶಾಂತಿ ಸೌಹಾರ್ದತೆಯನ್ನು ಕಾಪಾಡುವ ಹಿತ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ರಾಜಕೀಯ ಪಕ್ಷದ ಮುಖಂಡರು, ವಿವಿಧ ಸಂಘ ಸಂಸ್ಥೆಗಳ ( ಶಿಕ್ಷಣ ಮತ್ತು ಧಾರ್ಮಿಕ) ಪ್ರತಿನಿಧಿಗಳು ಹಾಗೂ ಎಲ್ಲಾ ಸಮುದಾಯದ ಮುಖಂಡರುಗಳೊಂದಿಗೆ ಆಯೋಜಿಸಿರುವ ಸಭೆಯಲ್ಲಿ ಸಚಿವರು ಭಾಗವಹಿಸಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸೌಹಾರ್ದತೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಜುಲೈ 9ರಂದು ಮಧ್ಯಾಹ್ನ 12 ಗಂಟೆಗೆ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರ ಉಪಸ್ಥಿತಿಯಲ್ಲಿ, ಗೃಹ ಸಚಿವ ಡಾ.ಜಿ.ಪರಮೇಶ್ವರ ಅಧ್ಯಕ್ಷತೆಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉಪಸ್ಥಿತಿಯಲ್ಲಿ ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಎಲ್ಲಾ ರಾಜಕೀಯ ಪಕ್ಷದ ಮುಖಂಡರು, ವಿವಿಧ ಸಂಘ ಸಂಸ್ಥೆಗಳು/ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು, ಎಲ್ಲಾ ಧಾರ್ಮಿಕ ಸಂಸ್ಥೆಗಳ ಹಾಗೂ ಎಲ್ಲಾ ಸಮುದಾಯದ ಮುಖಂಡರುಗಳೊಂದಿಗೆ ಸಭೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣ ಆಯೋಜಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು