9:00 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕುರ್ನಾಡು ಸಮೀಪ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕಾರಾಗೃಹಕ್ಕೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಭೇಟಿ

13/06/2025, 21:18

ಮಂಗಳೂರು(reporterkarnataka.com): ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಮುಡಿಪು ಕುರ್ನಾಡು ಸಮೀಪದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಜಿಲ್ಲಾ ಕಾರಾಗೃಹ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿದರು.
ನಿರ್ಮಾಣ ಹಂತದ ಕಟ್ಟಡ ವೀಕ್ಷಿಸಿದ ಅವರು ಕಾಮಗಾರಿಗಳ ಮಾಹಿತಿ ಪಡೆದರು. ಕಾಮಗಾರಿಯನ್ನು ಉತ್ತಮ ಗುಣಮಟ್ಟದಲ್ಲಿ ತ್ವರಿತಗತಿಯಲ್ಲಿ ನಡೆಸಿ ಆದಷ್ಟು ಬೇಗನೆ ಪೂರ್ಣಗೊಳಿಸಬೇಕು ಎಂದು ಅವರು ಸೂಚಿಸಿದರು.

ಕಾರಾಗೃಹದ ಆವರಣ ಗೋಡೆ ಸೇರಿದಂತೆ ಅತ್ಯುನ್ನತ ಭದ್ರತಾ ವ್ಯವಸ್ಥೆ ನೂತನ ಕಾರಾಗೃಹ ಸಂಕೀರ್ಣದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು. ಕಾರಾಗೃಹ ಇಲಾಖೆ ಡಿಐಜಿ ದಿವ್ಯಶ್ರೀ ಅವರು ಸಚಿವರಿಗೆ ವಿವರ ನೀಡಿದರು.
ಈ ಸಂದರ್ಭದಲ್ಲಿ ಶಾಸಕರಾದ ಅಶೋಕ್ ಕುಮಾರ್ ರೈ, ಮಂಜುನಾಥ ಭಂಡಾರಿ, ಐವನ್ ಡಿಸೋಜಾ, ಪೊಲೀಸ್ ಮಹಾ ನಿರ್ದೇಶಕ ಎಂ.ಎ.ಸಲೀಂ , ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು