ಇತ್ತೀಚಿನ ಸುದ್ದಿ
Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ: ಗೃಹ ಸಚಿವರು ಚಾಲನೆ
09/04/2025, 13:59

ಬೆಂಗಳೂರು(reporterkarnataka.com): ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೀಡಲಾಗುವ ನೂತನ ವಾಹನಗಳನ್ನು ಗೃಹ ಸಚಿವ ಡಾ. ಜಿ. ಪರಮೇಶ್ವರ ಮತ್ತು ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರ ಸಮ್ಮುಖದಲ್ಲಿ ವಿಧಾನ ಸೌಧದ ಭವ್ಯ ಮೆಟ್ಟಿಲುಗಳ ಮುಂಭಾಗದಲ್ಲಿ ಲೋಕಾರ್ಪಣೆಗೊಳಿಸಿಲಾಯಿತು.
ಈ ಸಂದರ್ಭದಲ್ಲಿ, ಪೊಲೀಸ್ ಮಹಾನಿರ್ದೇಶಕ ಮತ್ತು ಪೊಲೀಸ್ ಮಹಾನಿರೀಕ್ಷಕ ಡಾ. ಅಲೋಕ್ ಮೋಹನ್, ಸಿ.ಐ.ಡಿ ವಿಭಾಗದ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ. ಸಲೀಂ, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆರ್.ಹಿತೇಂದ್ರ, ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಜೆ. ಅರುಣ್ ಚಕ್ರವರ್ತಿ, ಅಪರಾಧ ಮತ್ತು ತಾಂತ್ರಿಕ ಸೇವೆಗಳ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪಿ. ಹರೀಶೇಖರನ್, ಆಡಳಿತ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಸೌಮೇಂದು ಮುಖರ್ಜಿ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.