11:32 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

Home Minister | ಪೊಲೀಸರು ಸ್ವಂತ ವಾಹನದ ಮೇಲೆ ಪೊಲೀಸ್​ ಎಂದು ಬರೆಸುವಂತಿಲ್ಲ: ಗೃಹ ಸಚಿವ ಡಾ. ಜಿ. ಪರಮೇಶ್ವರ್​

13/03/2025, 14:50

ಬೆಂಗಳೂರು(reporterkarnataka.com): ಪೊಲೀಸ್ ಇಲಾಖೆಯ ಅಧಿಕಾರಿಗಳು ‌ಹಾಗೂ ಸಿಬ್ಬಂದಿ ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ. ಒಂದೇ ವೇಳೆ ಬರೆಸಿದ್ದರೇ ಅದು ಕಾನೂನು ಉಲ್ಲಂಘಿಸಿದಂತೆ ಎಂದು ಗೃಹ ಸಚಿವ ಡಾ.‌ಜಿ.ಪರಮೇಶ್ವರ್ ಅವರು ಸ್ಪಷ್ಟನೆ ನೀಡಿದ್ದಾರೆ.
ಶ್ರವಣಬೆಳಗೊಳದ ಶಾಸಕ ಸಿ.ಎನ್. ಬಾಲಕೃಷ್ಣ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 561ಕ್ಕೆ ಲಿಖಿತ ಮೂಲಕ ಸಚಿವ ಡಾ. ಜಿ. ಪರಮೇಶ್ವರ್​ ಉತ್ತರಿಸಿದ್ದಾರೆ.
ರಾಜ್ಯದ ಪೊಲೀಸ್​ ಇಲಾಖೆಯ ಅಧಿಕಾರಿಗಳು ಮತ್ತು ನೌಕರರು ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್​ ಎಂದು ಬರೆಸಿಕೊಂಡು ಸಂಚಾರ ಮಾಡಲು ಕಾನೂನಿನಲ್ಲಿ ಅವಕಾಶವಿದೆಯೇ ಎಂಬ ಶಾಸಕ ಸಿ.ಎನ್. ಬಾಲಕೃಷ್ಣ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಗೃಹ ಸಚಿವರು ರಾಜ್ಯದ ಪೊಲೀಸ್ ಇಲಾಖೆಯ ಅಧಿಕಾರಿಗಳು ‌ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸಿಕೊಂಡು ಸಂಚಾರ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಉತ್ತರ ನೀಡಿದ್ದಾರೆ.
ಹಾಗಿದ್ದಲ್ಲಿ, ಸ್ವಂತ ವಾಹನಗಳ ಮೇಲೆ ಪೊಲೀಸ್​ ಎಂದು ಬರೆಸಿಕೊಂಡು ಕೆಲ ಪೊಲೀಸ್​ ನೌಕರರು ಮತ್ತು ಅಧಿಕಾರಿಗಳು ಕಾನೂನಿನ ಉಲ್ಲಂಘನೆ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ? ಬಂದಿದ್ದಲ್ಲಿ, ಇವರ ವಿರುದ್ಧ ಸರ್ಕಾರವು ತೆಗೆದುಕೊಂಡಿರುವ ಕ್ರಮಗಳೇನು? ಎಂಬ ಪ್ರಶ್ನೆಗೆ
ತಮ್ಮ ಸ್ವಂತ ವಾಹನಗಳ ಮೇಲೆ ಪೊಲೀಸ್ ಎಂದು ಬರೆಯಿಸಿಕೊಂಡಿರುವುದು ಗೃಹ ಇಲಾಖೆಯ ಗಮನಕ್ಕೆ ಬಂದಿದೆ. ಸ್ವಂತ ವಾಹನದ ಮೇಲೆ ಪೊಲೀಸ್ ಅಧಿಕಾರಿಗಳು ಹಾಗೂ ನೌಕರರು ಪೊಲೀಸ್ ಎಂದು ಬರೆಸಿದ್ದರೇ ಅವರ ವಿರುದ್ಧ 2022 ರ ಸರ್ಕಾರದ ಸುತ್ತೋಲೆ ಪ್ರಕಾರ ಕಾನೂನು ಕ್ರಮ ಆಗುತ್ತದೆ ಎಂದು ಗೃಹ ಸಚಿವ ಡಾ. ಪರಮೇಶ್ವರ ಲಿಖಿತ ಉತ್ತರ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು