4:39 PM Monday29 - December 2025
ಬ್ರೇಕಿಂಗ್ ನ್ಯೂಸ್
ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ

ಇತ್ತೀಚಿನ ಸುದ್ದಿ

ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

29/12/2025, 16:38

ಹಾವೇರಿ(reporterkarnataka.com): ಮೆಕ್ಕೆಜೋಳ ಖರೀದಿ ವಿಚಾರದಲ್ಲಿ ರಾಜ್ಯ ಸರ್ಕಾರ ರೈತರ ಮೂಗಿಗೆ ತುಪ್ಪ ಹಚ್ಚುವ ಕೆಲಸ ಮಾಡಿ ರೈತರಿಗೆ ಮೋಸ ಮಾಡಿದೆ. ಉತ್ತರ ಕರ್ನಾಟಕದಲ್ಲಿ ಶೇ 80ರಷ್ಟು ರೈತರು ಮೆಕ್ಕೆಜೋಳ ಬೆಳೆದಿದ್ದಾರೆ. ಪ್ರತಿ ತಾಲೂಕು ಕೇಂದ್ರದಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮಾಯಿ ಆಗ್ರಹಿಸಿದರು.
ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 54 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಬೆಳೆದಿದೆ. ಇವರು 10 ಲಕ್ಷ ಮೆಟ್ರಿಕ್ ಟನ್ ಖರೀದಿಸುವುದಾಗಿ ಹೇಳಿದ್ದರು. ಇದುವರೆಗೂ ಐವತ್ತು, ಆರವತ್ತು ಮೆಟ್ರಿಕ್ ಟನ್ ಖರೀದಿ ಮಾಡಿರಬೇಕು. ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ. ಏಜೆನ್ಸಿ ನಿಗದಿ ಮಾಡಿಲ್ಲ. ಸುಮ್ಮನೆ ಮೊಲ್ಯಾಸಿಸ್ ನವರಿಗೆ ಖರೀದಿಸುವಂತೆ ಹೇಳಿದರೆ ಆಗುವುದಿಲ್ಲ. ರಾಜ್ಯ ಸರ್ಕಾರ ಖರೀದಿ ಕೇಂದ್ರ ಆರಂಭಿಸಿದರೆ ರೈತರಿಗೆ ಅನುಕೂಲವಾಗುತ್ತದೆ. ಇಲ್ಲದಿದದ್ದರೆ ರೈತರಿಗೆ ಅನ್ಯಾಯವಾಗಲಿದೆ. ಸಿಎಂ ಹೇಳಿ ಒಂದು ತಿಂಗಳಾಯಿತು. ಇದುವರೆಗೂ ಖರೀದಿ ಕೇಂದ್ರ ತೆರೆದಿಲ್ಲ. ಸುಮಾರು 20 ಜಿಲ್ಲೆಗಳಲ್ಲಿ ಮೆಕ್ಕೆಜೋಳ ಬೆಳೆಯುವ ರೈತರನ್ನು ರಾಜ್ಯ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಆರೋಪಿಸಿದರು.
ನೋಂದಣಿಯಾದ ರೈತರು ಟ್ಯಾಕ್ಟರ್‌ನಲ್ಲಿ ತಂದು ನಿಲ್ಲಿಸಿದ್ದಾರೆ. ತೂಕ ಕಡಿಮೆಯಾಗುತ್ತಿದೆ. ರೈತರ ಹೊಲಗಳಲ್ಲಿ ಹಾಳಾಗುತ್ತಿದೆ. ಇಲ್ಲಿಂದ ಶಿಕಾರಿಪುರಕ್ಕೆ ತೆಗೆದುಕೊಂಡು ಹೋಗುವಂತೆ ಹೇಳುತ್ತಾರೆ. ಅಲ್ಲಿ ರಾತ್ರಿಯೆಲ್ಲಾ ರೈತರು ಕಾಯಬೇಕು. ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಯಲ್ಲಿ ಇದು ಒಂದು ಎಂದು ಹೇಳಿದರು.

*ಸರ್ಕಾರ ಶಾಮೀಲು:*
ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕೆಟ್ಟು ಬಹಳ ದಿನ ಆಗಿದೆ. ಪ್ರತಿ ದಿನ ಲೂಟಿ, ದರೋಡೆ, ಕೊಲೆ ಸುಲಿಗೆ ನಡೆಯುತ್ತಿದೆ. ಮೈಸೂರಿನಲ್ಲಿ ಹಗಲಿನಲ್ಲಿಯೇ ದರೋಡೆಯಾಗಿದೆ. ದಷ್ಟ ಚರ್ಮದ ಸರ್ಕಾರ, ಕರ್ನಾಟಕದಲ್ಲಿಯೇ ಡ್ರಗ್ಸ್ ತಯಾರಿಸಿ ಇಡಿ ದೇಶಕ್ಕೆ ಸರಬರಾಜು ಮಾಡುವ ಫ್ಯಾಕ್ಟರಿಗಳೇ ರಾಜ್ಯದಲ್ಲಿ ಆರಂಭವಾಗಿವೆ ಎಂದರೆ ರಾಜ್ಯ ಸರ್ಕಾರವೇ ಶಾಮೀಲಾಗಿದೆ. ಮಹಾರಾಷ್ಟ್ರದವರು ಒಂದು ದಾಳಿ ಮಾಡಿದ್ದಾರೆ ಎಂದರೆ ಇವರು ಏನು ಕತ್ತೆ ಕಾಯುತ್ತಿದ್ದರಾ, ಯಾವ ಡಿಸಿಪಿ ವ್ಯಾಪ್ತಿಯಲ್ಲಿ ಬರುತ್ತದೆ. ಆ ಡಿಸಿಪಿಗಳನ್ನು ಸಸ್ಪೆಂಡ್ ಮಾಡಬೇಕು. ಇದಕ್ಕೆ ನೇರವಾಗಿ ಗೃಹ ಸಚಿವರು ಮತ್ತು ಗೃಹ ಇಲಾಖೆ ಹೊಣೆ ಎಂದು ಆರೋಪಿಸಿದರು.

*ಅನ್ನಭಾಗ್ಯದಲ್ಲೂ ಲೂಟಿ:*
ಅನ್ನಭಾಗ್ಯ ಅಕ್ಕಿ ಕಳ್ಳಸಾಗಾಣಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಹಾವೇರಿಯಲ್ಲಿ ಅನ್ನಭಾಗ್ಯದ ಅಕ್ಕಿ ಅಕ್ರಮವಾಗಿ ಮಾರಾಟವಾಗುತ್ತಿರುವ ಬಗ್ಗೆ ಜನರೇ ಹಿಡಿದುಕೊಟ್ಟರೂ ಅಧಿಕಾರಿಗಳು ಬಂದಿಲ್ಲ. ಬಡವರಿಗೆ ಅಕ್ಕಿ ಕೊಡುವಲ್ಲಿಯೂ ರೇಷನ್ ಕಾರ್ಡ್‌ಗೆ ಪರ್ಸಂಟೇಜ್ ಫಿಕ್ಸ್ ಮಾಡಿದ್ದಾರೆ. ದೊಡ್ಡ ಪ್ರಮಾಣದಲ್ಲಿ ಹೊರ ರಾಜ್ಯ ಮತ್ತು ಹೊಟೇಲ್‌ಗಳಿಗೆ ಹೋಗುತ್ತಿದೆ. ಅನ್ನಭಾಗ್ಯ ಅಕ್ಕಿಯ ಲೂಟಿಯಲ್ಲಿ ಅಧಿಕಾರಿಗಳ ಪಾಲಿದೆ ಎಂದು ಆರೋಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು