ಇತ್ತೀಚಿನ ಸುದ್ದಿ
ಹೊನ್ನಾವರ ಮಾಜಿ ಶಾಸಕ ಬಿಜೆಪಿಯ ಎಂ.ಪಿ.ಕರ್ಕಿ ನಿಧನ
18/10/2021, 23:06
ಹೊನ್ನಾವರ(reporterkarnataka.com): ಮಾಜಿ ಶಾಸಕ ಎಂ.ಪಿ. ಕರ್ಕಿ(86) ಸೋಮವಾರ ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಉ.ಕ. ಜಿಲ್ಲೆಯಲ್ಲಿ ಬಿಜೆಪಿಗೆ ಭದ್ರ ಬುನಾದಿ ಹಾಕುವಲ್ಲಿ ಮಹತ್ತರ ಕೊಡುಗೆ ನೀಡಿರುವ ಅವರು ಹೊನ್ನಾವರ ವಿಧಾನಸಭೆ ಕ್ಷೇತ್ರವನ್ನು ಎರಡು ಬಾರಿ ಪ್ರತಿನಿಧಿಸಿದ್ದರು.
ಜಿಲ್ಲೆಯಲ್ಲಿ ಡಾ. ಚಿತ್ತರಂಜನ್ ಜತೆ ಪಕ್ಷಕ್ಕೆ ಪ್ರಬಲ ಅಡಿಪಾಯ ಒದಗಿಸಿದ್ದರು. ಹಿಂದೂಪರ ಅನೇಕ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದರು.
ಹೊನ್ನಾವರ ಎಜ್ಯುಕೇಶನ ಸೊಸೈಟಿ ಸೇರಿ ವಿವಿಧ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
ನಾಲ್ಕೈದು ದಿನಗಳ ಹಿಂದೆ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅವರು ಪುತ್ರ, ಪುತ್ರಿ ಹಾಗೂ ಅಪಾರ ಬಳಗವನ್ನು ಅಗಲಿದ್ದಾರೆ.














