5:01 PM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಆ.9ರಂದು ಕದ್ರಿ ಬಂಜನ್‌ನಲ್ಲಿ ಮೂಲ ಕ್ಷೇತ್ರದಲ್ಲಿ ನಿವೃತ್ತ ವೀರ ಯೋಧರು, ವೀರ ನಾರಿಯರಿಗೆ ಗೌರವ ಸಮಾರಂಭ

06/08/2026, 18:01

ಮಂಗಳೂರು:(Reporterkarnataka.com):ದೇಶದ ರಕ್ಷಣೆಗಾಗಿ ಸೇವೆ ಸಲ್ಲಿಸಿದ ಕುಲಾಲ ಸಮುದಾಯದ ನಿವೃತ್ತ ವೀರ ಯೋಧರು ಹಾಗೂ ವೀರ ನಾರಿಯರನ್ನು ಗೌರವಿಸುವ ವಿಶೇಷ ಸಮಾರಂಭವು ಆಗಸ್ಟ್ 9ರಂದು ಕದ್ರಿ ಬಂಜನ್ ಚಾವಡಿಯಲ್ಲಿ ನಡೆಯಲಿದೆ.

ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರ (ರಿ.) ವತಿಯಿಂದ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಕುಲಾಲ ಸಮುದಾಯಕ್ಕೆ ಸೇರಿದ 60ಕ್ಕೂ ಅಧಿಕ ನಿವೃತ್ತ ವೀರ ಯೋಧರು ಹಾಗೂ ವೀರ ನಾರಿಯರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಗುವುದು.

ಆಗಸ್ಟ್ 9ರ ಭಾನುವಾರ ಬೆಳಿಗ್ಗೆ 11.30ಕ್ಕೆ ಕಾರ್ಯಕ್ರಮ ನಡೆಯಲಿದ್ದು, ದೇಶದ ರಕ್ಷಣೆಗೆ ತಮ್ಮ ಜೀವನವನ್ನು ಸಮರ್ಪಿಸಿದ ಸಮಾಜದ ಯೋಧರನ್ನು ಗುರುತಿಸಿ ಗೌರವಿಸುವುದು ಹಾಗೂ ಕ್ಷೇತ್ರದ ನಾಗದೇವರು ಮತ್ತು ದೈವ-ದೇವರ ಅನುಗ್ರಹವನ್ನು ಅವರಿಗೆ ಪ್ರಾರ್ಥಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ.

ಕಾರ್ಯಕ್ರಮಕ್ಕೆ ಬೆಂಗಳೂರಿನ ಶ್ರೀ ರಾಧಾಕೃಷ್ಣ ಬಂಜನ್ ಮಹಾ ಪ್ರಾಯೋಜಕರಾಗಿದ್ದಾರೆ. ಮೈಸೂರಿನ ‘ಹಿಲ್ ಸೈಡ್ ಆರ್ಕಿಟೆಕ್ಟ್’ ವಿನ್ಯಾಸಕರು ಕಾರ್ಯಕ್ರಮಕ್ಕೆ ಸಹಕಾರ ನೀಡುತ್ತಿದ್ದಾರೆ.

ಪ್ರಧಾನ ಅತಿಥಿಗಳಾಗಿ ನಿವೃತ್ತ ಬಿಎಸ್‌ಎಫ್ ಕಮಾಂಡೆಂಟ್ ಹಾಗೂ ಕರ್ನಾಟಕ ರಾಜ್ಯ ನಿವೃತ್ತ ಯೋಧರ ಕ್ಷೇಮಾಭಿವೃದ್ಧಿ ಸಂಘದ (ರಿ.) ಬೆಂಗಳೂರು ಅಧ್ಯಕ್ಷ ಶ್ರೀ ಡಿ. ಚಂದಪ್ಪ ಮೂಲ್ಯ, ಶ್ರೀ ವೀರನಾರಾಯಣ ದೇವಸ್ಥಾನ ಕುಲಶೇಖರದ ಅಧ್ಯಕ್ಷ ಶ್ರೀ ಸುಂದರ್ ಮೂಲ್ಯ, ಬ್ರಾಹ್ಮಕಲಸ ಸಮಿತಿ, ಶ್ರೀ ವೀರನಾರಾಯಣ ದೇವಸ್ಥಾನ ಕುಲಶೇಖರದ ಅಧ್ಯಕ್ಷ ಶ್ರೀ ಪ್ರೇಮಾನಂದ ಕುಲಾಲ್ ಹಾಗೂ ನಿವೃತ್ತ ಡಿಜಿಎಂ, ಬಿಎಸ್‌ಎನ್‌ಎಲ್ ಶ್ರೀ ಐತಪ್ಪ ಮೂಲ್ಯ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಪ್ರಧಾನ ಸಂಘಟಕ ಯತೀಶ್ ಕುಮಾರ್ ಮಾತನಾಡಿ, ದೇಶದ ಸೇವೆಯಲ್ಲಿ ತಮ್ಮ ಅಮೂಲ್ಯ ಕೊಡುಗೆ ನೀಡಿದ ಸಮುದಾಯದ ನಿವೃತ್ತ ಯೋಧರು ಹಾಗೂ ವೀರ ನಾರಿಯರನ್ನು ಗೌರವಿಸುವುದು ನಮ್ಮೆಲ್ಲರ ಹೆಮ್ಮೆಯ ಸಂಗತಿ. ಅವರ ಸೇವೆಯನ್ನು ಸ್ಮರಿಸಿ ಗೌರವಿಸುವುದರೊಂದಿಗೆ, ಮುಂದಿನ ಪೀಳಿಗೆಗೆ ದೇಶ ಸೇವೆಯ ಪ್ರೇರಣೆ ನೀಡುವುದು ಕಾರ್ಯಕ್ರಮದ ಆಶಯವಾಗಿದೆ ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ನಾಯಬ್‌ಗಳಾದ ಮೋಹನ್ ಕಡಂಬಾರ ಹಾಗೂ ಗೋಪಾಲ್ ಎನ್. ಕುಲಾಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು