10:10 AM Saturday15 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ…

ಇತ್ತೀಚಿನ ಸುದ್ದಿ

ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇಗುಲ: ಶ್ರೀಮಾತೆಯ ಪುನರ್ ಪ್ರತಿಷ್ಠಾ ಸ್ವರ್ಣ ಮಹೋತ್ಸವ ಮಾಹಿತಿ ಪತ್ರ ಲೋಕಾರ್ಪಣೆ

18/10/2022, 22:57

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka gmail.com

ಹೊರನಾಡಿನ ಆದಿಶಕ್ತ್ಯಾತ್ಮಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಮಂಗಳವಾರ ಶ್ರೀ ಕ್ಷೇತ್ರದ ಧಾರ್ಮಿಕ ಕಾರ್ಯಕ್ರಮದಲ್ಲಿ ಶ್ರೀಮಾತೆಯ ಪುನಃ ಪ್ರತಿಷ್ಠಾ ಸ್ವರ್ಣ ಮಹೋತ್ಸವ ಸಹಿತ ಬ್ರಹ್ಮ ಕಲಶೋತ್ಸವ- 2023ರ ಮಾಹಿತಿ ಪತ್ರ ಲೋಕಾರ್ಪಣೆ ಹಾಗೂ ಗ್ರಾಮೀಣಾಭಿವೃದ್ಧಿ ಯೋಜನೆಯ ವಿವಿಧ ಕಾರ್ಯಕ್ರಮಗಳು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ವಿನಯ್ ಗುರೂಜಿ ನೆರವೇರಿಸಿದರು. ಅಧ್ಯಕ್ಷತೆಯನ್ನು ಧರ್ಮಕರ್ತರಾದ ಜಿ. ಭೀಮೇಶ್ವರ ಜೋಷಿ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಶ್ರೀಮಾತೆಯ ಪುನಃ ಪ್ರತಿಷ್ಠಾ ಸ್ವರ್ಣ ಮಹೋತ್ಸವ ಸಹಿತ ಬ್ರಹ್ಮ ಕಲಶೋತ್ಸವ- 2023ರ ಮಾಹಿತಿ ಪತ್ರ ಲೋಕಾರ್ಪಣೆ ಮಾಡಿ, ತಾರೀಕು 22-04-2023 ರಿಂದ 29-04-2023ರ ವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಮಾತೆಯ ಪುನಃ ಪ್ರತಿಷ್ಠಾ ಸ್ವರ್ಣ ಮಹೋತ್ಸವ ಹಾಗೂ ಬ್ರಹ್ಮಕುಂಭಾಭಿಷೇಕ ನಡೆಯುವ ಬಗ್ಗೆ ಜಿ.ಭೀಮೇಶ್ವರ ಜೋಷಿ ಮಾಹಿತಿ ನೀಡಿದರು.

ಗ್ರಾಮೀಣಾಭಿವೃದ್ಧಿ ಯೋಜನೆಯ ಅನ್ನದಾಸೋಹ ಯೋಜನೆಯಲ್ಲಿ ಸರಕಾರಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳಿಗೆ ಮತ್ತು ಆಯ್ದ ದೇವಸ್ಥಾನಗಳಿಗೆ ತಟ್ಟೆ ಲೋಟಗಳ ವಿವರಣೆ ಮಾಡಲಾಯಿತು. ಶೈಕ್ಷಣಿಕ ಅಭಿವೃದ್ಧಿ ಯೋಜನೆಯಲ್ಲಿ ಕಳಸ ತಾಲೂಕಿನ ಪ್ರೌಢಶಾಲಾ ಮಕ್ಕಳಿಗೆ ಉಚಿತ ಟಿಪ್ಪಣಿ ಪುಸ್ತಕಗಳ ವಿತರಣೆ ಮಾಡಲಾಯಿತು.

ಕಳಸ ತಾಲೂಕಿನ ಪ್ರೌಢಶಾಲೆಗಳು ಪದವಿ ಪೂರ್ವ ಮತ್ತು ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಕೃಷಿ ಸಮೃದ್ಧಿ ಯೋಜನೆ ಯಲ್ಲಿ ರೈತರಿಗೆ ಕಲ್ಪವೃಕ್ಷ ಸಸಿಗಳ ವಿತರಣೆಯನ್ನು ಮಾಡಲಾಯಿತು.

ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯಾಧ್ಯಕ್ಷ ಅಶೋಕ್ ಹಾರ್ನಳ್ಳಿ, ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ, ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡರು, ರಾಜಲಕ್ಷ್ಮೀ ಬಿ. ಜೋಷಿ, ರಾಮನಾರಾಯಣ ಜೋಷಿ, ಅಖಿಲ ಭಾರತ ಬ್ರಾಹ್ಮಣ ಸಮಾಜದ ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಭಟ್, ಹೊರನಾಡು ಗ್ರಾಮ ಪಂಚಾಯತಿ ಅಧ್ಯಕ್ಷ ವೃಷಭರಾಜ್ ಇದ್ದರು

ಇತ್ತೀಚಿನ ಸುದ್ದಿ

ಜಾಹೀರಾತು