8:30 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಹೋರಾಟಗಾರರ ಜತೆ ಕೂತು ಪ್ರಚಾರ ಪಡೆದ ಯು.ಟಿ. ಖಾದರ್ ಗೆ ಟೋಲ್ ಗೇಟ್ ತೆರವು ಮಾಡಲು ಸಾಧ್ಯವಾಯಿತೆ?: ಶಾಸಕ ಡಾ.ಭರತ್ ಶೆಟ್ಟಿ ತಿರುಗೇಟು

18/11/2022, 19:53

ಮಂಗಳೂರು(reporterkarnataka.com): ಅಧಿಕಾರದಲ್ಲಿದ್ದಾಗ ಟೋಲ್ ಗೇಟ್ ತೆರವು ಮಾಡುವ ಮಾತು ನೀಡಿ ಹೋರಾಟಗಾರರ ಜೊತೆ ಭಾಗವಹಿಸಿ ಪ್ರಚಾರ ಪಡೆದುಕೊಂಡು ಎದ್ದು ಹೋಗಿರುವ ಹೋಗಿರುವ ಶಾಸಕ ಯು. ಟಿ. ಖಾದರ್ ಅವರಿಗೆ ಟೋಲ್ ಗೇಟ್ ತೆರವಿಗೆ ಪ್ರಕ್ರಿಯೆ ಆರಂಭಿಸಲೂ ವಿಫಲರಾಗಿ, ಇದೀಗ ನನ್ನ ವಿರುದ್ಧ ಮಾತನಾಡುತ್ತಿರುವುದು ಹಾಸ್ಯಸ್ಪದ ಎಂದು ಶಾಸಕ ಡಾಕ್ಟರ್ ಭರತ್ ಶೆಟ್ಟಿ ವೈ. ಅವರು ಖಾದರ್ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

ರಾಜ್ಯ ಸರಕಾರದ ಪ್ರಧಾನ ಕಾರ್ಯದರ್ಶಿ ಅವರೊಂದಿಗೆ ಮಾತುಕತೆ ಮಾಡಿರುವೆ ಎಂದು ಯು.ಟಿ. ಖಾದರ್ ಹೇಳಿಕೊಂಡು ಬಂದಿದ್ದಾರೆ. ಆದರೆ ರಾಜ್ಯದಿಂದ ಕೇಂದ್ರದ ಹೆದ್ದಾರಿ ಇಲಾಖೆಗೆ
ಕಾನೂನಾತ್ಮಕವಾಗಿ ಅಧಿಕೃತ ಪತ್ರವನ್ನು ಕಳಿಸಲು ಕೂಡ ಇವರಿಗೆ ಸಾಧ್ಯವಾಗಿರಲಿಲ್ಲ.

ಇದೀಗ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರ
ಇರುವುದರಿಂದ ವೈಫಲ್ಯವನ್ನು ಮರೆಮಾಚಲು ಯತ್ನಿಸುತ್ತಿದ್ದಾರೆ. ಚುನಾವಣೆ ಹತ್ತಿರ ಬಂದಾಗ ಕಾಂಗ್ರೆಸ್ನಿಂದ ಇಂತಹ ಆರೋಪಗಳು ನಿರೀಕ್ಷಿತ ಎಂದು ಶಾಸಕ ಭರತ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ.

ಇರ್ಕಾನ್ ಸಂಸ್ಥೆ ಹಾಗೂ ನವಯುಗ ಖಾಸಗಿ ಸಂಸ್ಥೆಯು ಟೋಲ್ ಗೇಟ್ ಸ್ಥಾಪಿಸಲು ಅವಕಾಶ ನೀಡುವ ಸಲುವಾಗಿ 2013ರ ಮಾರ್ಚ್ ನಲ್ಲಿ ಹೆಜಮಾಡಿ ಟೋಲ್ ಗೇಟ್, ಜೂನ್ ನಲ್ಲಿ ಸುರತ್ಕಲ್ ನಲ್ಲಿ ಟೋಲ್ ಗೇಟ್ ನಿರ್ಮಿಸಲು ಈ ಹಿಂದಿನ ಯುಪಿಎ ಸರಕಾರವೇ ರಾಜ್ಯ ಪತ್ರದಲ್ಲಿ ಅಧಿಕೃತವಾಗಿ ಪ್ರಕಟಿಸಿ ಕೊಡುಗೆ ನೀಡಿದೆ ಎಂದು ಬಹಿರಂಗ ಪಡಿಸಿರುವ ಡಾ.ಭರತ್ ಶೆಟ್ಟಿ ಅವರು,ಅಂದೇ ಹಿಂಪಡೆಯಲು ಇದ್ದ ಅವಕಾಶವನ್ನು ಕೈಚೆಲ್ಲಿರುವ ಕಾಂಗ್ರೆಸ್ ರಾಜಕೀಯಕ್ಕಾಗಿ ಇದೀಗ ಲಾಭ ಪಡೆಯಲು ಮುಂದಾಗಿದೆ ಎಂದು ಆರೋಪಿಸಿದರು.

ಆಗ 60 ಕಿಲೋಮೀಟರ್ ಒಳಗೆ ಟೋಲ್ ಗೇಟ್ ನಿರ್ಮಾಣ ಕಾನೂನಾತ್ಮಕವಾಗಿ ಸರಿಯಲ್ಲ ಎಂದು ಈ ಹಿಂದೆ ಆಡಳಿತ ನಡೆಸಿದ್ದ ಯುಪಿಎ ಸರಕಾರದ ಹೆದ್ದಾರಿ ಮಂತ್ರಿಗಳಿಗೆ ತಿಳಿದಿರಲಿಲ್ಲವೇ?
ಈಗಿನ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಸಂಸತ್ತಿನಲ್ಲಿಯೇ 60 ಕಿಲೋ ಮೀಟರ್ ವ್ಯಾಪ್ತಿಗಳಲ್ಲ ಒಂದು ಟೋಲ್ ಗೇಟ್ ಇರುವುದು ಸರಿಯಾದ ಕ್ರಮ ಎಂದು ಒಪ್ಪಿಕೊಂಡು ದೇಶದಾದ್ಯಂತ ಇರುವ ಟೋಲ್ ಗೇಟ್ ಗಳ ವಿಲೀನಕ್ಕೆ ಮುಂದಾಗಿರುವುದನ್ನು ಶಾಸಕ ಯು ಟಿ ಖಾದರ್ ಅವರು ಮುಕ್ತ ಮನಸ್ಸಿನಿಂದ ಪ್ರಶಂಶಿಸುವ ಮನಸ್ಸು ಮಾಡಬೇಕು ಎಂದು ಸಲಹೆಯನ್ನು ನೀಡಿದ್ದಾರೆ.

ನನಗೆ ಕೇವಲ ಆಶ್ವಾಸನೆ ನೀಡಿ ಹಿಂದೆ ಹೋಗುವುದರಲ್ಲಿ ಆಸಕ್ತಿ ಇಲ್ಲ. ಗಂಭೀರವಾದ ಪ್ರಯತ್ನವನ್ನು ನಡೆಸಿ ಸಂಸದರ ಮುತುವರ್ಜಿಯಲ್ಲಿ ಟೋಲ್ ಗೇಟ್ ಅನ್ನ ತೆರವುಗೊಳಿಸಲು ಯಶಸ್ವಿಯಾಗಿದ್ದೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು