5:22 PM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬಸ್ಸಿನ ಚಕ್ರದಡಿ ಸಿಲುಕಿ ಮಹಿಳೆ ಸಾವು

17/08/2026, 11:44

ಕೊಡಗು(reporterkarnataka.com): ಕೊಡ್ಲಿಪೇಟೆ ಸಮೀಪದ ನಿಲುವಾಗಿಲು ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನ ಮತ್ತು ಸರಕಾರಿ ಬಸ್ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೆ ಮಹಿಳೆಯೊಬ್ಬರು ಮ್ರತಪಟ್ಟಿರುವ ಘಟನೆ ಇಂದು ಸಂಜೆ ನಡೆದಿದೆ.
ಅರಕಲಗೂಡುವಿನಿಂದ ಕೊಡ್ಲಿಪೇಟೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಮಲ್ಲಿಪಟ್ಟಣ ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಬ್ಯೆಕ್ ಹಿಂಬದಿಯಲ್ಲಿದ್ದ ಮಲ್ಲಿಪಟ್ಟಣ ನಿವಾಸಿ ಮಂಜುಳಾ (65) ಬಸ್ ನ ಹಿಂಬದಿ ಚಕ್ರದಡಿ ಸಿಲುಕಿ ಸ್ಥಳದಲ್ಲೆ ಮೃತಪಟ್ಟರೆ,ಬ್ಯೆಕ್ ಚಲಾಯಿಸುತ್ತಿದ್ದ ಸ್ಥಳೀಯ ಕಿರಿಕೊಡ್ಲಿ ನಿವಾಸಿ ನಿವೃತ್ತ ಪೋಸ್ಟ್‌ಮ್ಯಾನ್ ದೇವಪ್ಪರವರು ಗಾಯಗೊಂಡಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಅರಕಲಗೂಡು ಸರಕಾರಿ ಅಸ್ಪತ್ರೆಗೆ ಕೊಂಡೊಯ್ಯಲಾಗಿದೆ,ಅಪಘಾತ ಪಡಿಸಿದ KA-13-F-2211 ನೊಂದಣಿ ಸಂಖ್ಯೆಯ ಬಸ್ ಹಾಗೂ KA-12-R-9392 ಸಂಖ್ಯೆಯ ಬ್ಯೆಕ್ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕೊಡ್ಲಿಪೇಟೆ ಉಪ ಪೊಲೀಸ್ ಠಾಣೆಯ ಹಾಗೂ ಶನಿವಾರಸಂತೆ ಠಾಣೆಯ ಪೊಲೀಸ್ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಮುಂದಿನ ಕಾನೂನು ಕ್ರಮ ಕ್ಯೆಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು