ಇತ್ತೀಚಿನ ಸುದ್ದಿ
ದೇವರಕೊಲ್ಲಿ ಬಳಿ ಲಾರಿ- ಕಾರು ಭೀಕರ ಅಪಘಾತ: ಗೋಣಿಕೊಪ್ಪದ 4 ಮಂದಿ ಯುವಕರು ದಾರುಣ ಸಾವು
25/07/2025, 17:53

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಸುಳ್ಯ ಸಮೀಪದ
ಸಂಪಾಜೆ ಬಳಿಯ ದೇವರಕೊಲ್ಲಿಯಲ್ಲಿ ಟಿಪ್ಪರ್ ಲಾರಿ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ 4 ಮಂದಿ ಮೃತಪಟ್ಟಿದ್ದಾರೆ.
ಸಾವನ್ಬಪ್ಪಿದವರನ್ನು ಕೊಡಗು ಜಿಲ್ಲೆಯ ಗೋಣಿಕೊಪ್ಪಲಿನ ಮಾರುಕಟ್ಟೆ ರಸ್ತೆಯ ನಿವಾಸಿಗಳಾದ ನಿಹಾದ್, ರಿಸ್ವಾನ್, ರಾಕಿಬ್ ಹಾಗೂ ರೀಶು ಎಂದು ಗುರುತಿಸಲಾಗಿದೆ. ಇವರೆಲ್ಲ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಮಧ್ಯಾಹ್ನ 12.50 ಗಂಟೆ ವೇಳೆಗೆ ಈ ದುರ್ಘನೆ ಸಂಭವಿಸಿದೆ. ಮಡಿಕೇರಿಯಿಂದ ಸುಳ್ಯದ ಕಡೆಗೆ ಪ್ರಯಾಣಿಸುತ್ತಿದ್ದ ಕಾರು ಹಾಗೂ ಸುಳ್ಯ ಭಾಗದಿಂದ ಮಡಿಕೇರಿ ಕಡೆಗೆ ಬರುತ್ತಿದ್ದ ಲಾರಿಯ ನಡುವೆ ಅಪಘಾತ ಸಂಭವಿಸಿದೆ.
ಅಪಘಾತದ ತೀವ್ರತೆಗೆ ನಿಹಾದ್ ಹಾಗೂ ರಿಜ್ವಾನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಕೀಬ್ ಮತ್ತು ರಿಶು ಸುಳ್ಯ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮದ್ಯೆ ಕೊನೆಯುಸಿರೆಳೆದಿದ್ದಾರೆ. ಮಡಿಕೇರಿ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.