ಇತ್ತೀಚಿನ ಸುದ್ದಿ
ಛತ್ತೀಸ್ಗಢದಲ್ಲಿ ಭೀಕರ ವಿಮಾನ ಅಪಘಾತ: ಬೆಟ್ಟಕ್ಕೆ ಡಿಕ್ಕಿ ಹೊಡೆದ ಖಾಸಗಿ ಜೆಟ್, ಇಬ್ಬರು ಪೈಲೆಟ್ ಸಾವು
20/04/2026, 21:39
ಜಶ್ಪುರ(reporterkarnataka.com): ಛತ್ತೀಸ್ಗಢದ ಜಶ್ಪುರ ಜಿಲ್ಲೆಯಲ್ಲಿ ಸೋಮವಾರ ಮಧ್ಯಾಹ್ನ ಭೀಕರ ವಿಮಾನ ಅಪಘಾತ ಸಂಭವಿಸಿದೆ. ಹಾರಾಟ ನಡೆಸುತ್ತಿದ್ದ ಖಾಸಗಿ ವಿಮಾನವೊಂದು ನಿಯಂತ್ರಣ ತಪ್ಪಿ ಬೆಟ್ಟದ ಪ್ರದೇಶಕ್ಕೆ ಅಪ್ಪಳಿಸಿದ್ದು, ವಿಮಾನದಲ್ಲಿದ್ದ ಇಬ್ಬರು ಪೈಲಟ್ಗಳು ಮೃತಪಟ್ಟಿದ್ದಾರೆ.
ಜಶ್ಪುರ-ನಾರಾಯಣಪುರ ಗಡಿ ಭಾಗದ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಸ್ಥಳೀಯರು ನೀಡಿರುವ ಮಾಹಿತಿಯ ಪ್ರಕಾರ, ವಿಮಾನವು ಹಾರಾಟ ನಡೆಸುತ್ತಿದ್ದಾಗ ಮರವೊಂದಕ್ಕೆ ಡಿಕ್ಕಿ ಹೊಡೆದಿದೆ. ಕೂಡಲೇ ನಿಯಂತ್ರಣ ಕಳೆದುಕೊಂಡ ವಿಮಾನವು ಸಮೀಪದ ಬೆಟ್ಟಕ್ಕೆ ಅಪ್ಪಳಿಸಿ ಪತನಗೊಂಡಿದೆ. ಅಪಘಾತದ ರಭಸಕ್ಕೆ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳದಿಂದ ದಟ್ಟವಾದ ಹೊಗೆ ಮತ್ತು ಬೆಂಕಿಯ ಜ್ವಾಲೆಗಳು ಆಕಾಶಕ್ಕೆ ಚಿಮ್ಮುತ್ತಿರುವ ದೃಶ್ಯಗಳು ಕಂಡುಬಂದಿವೆ.












