ಇತ್ತೀಚಿನ ಸುದ್ದಿ
ಚಿತ್ರದುರ್ಗ ಬಳಿ ಭೀಕರ ರಸ್ತೆ ಅಪಘಾತ: ಲಾರಿ- ಕಾರು ಮುಖಾಮುಖಿ ಡಿಕ್ಕಿ; 4 ಮಂದಿ ಸ್ಥಳದಲ್ಲೇ ಸಾವು
11/01/2026, 14:28
ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ
info.reporterkarnataka@gmail.com
ಚಿತ್ರದುರ್ಗ ಸಮೀಪದ ಹಿರಿಯೂರು ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಹಿರಿಯೂರಿನ ಹಿಂಡಸಕಟ್ಟೆ ಬಳಿ ಶನಿವಾರ ತಡರಾತ್ರಿ ಈ ದುರ್ಘಟನೆ ನಡೆದಿದೆ. ಲಾರಿ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ನಂಜಯ್ಯನ ಕೊಟ್ಟಿಗೆ ಗ್ರಾಮದ ನಾಲ್ವರು ಮೃತಪಟ್ಟಿದ್ದಾರೆ. ಮೃತರನ್ನು ನಂಜುಂಡಿ, ವಿಶ್ವನಾಥ, ರಾಹುಲ್ ಹಾಗೂ ಯಶ್ವಂತ್ ಎಂದು ಗುರುತಿಸಲಾಗಿದೆ. ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಕೇಸು ದಾಖಲಿಸಿಕೊಂಡಿದ್ದಾರೆ.












