9:08 PM Saturday20 - June 2026
ಬ್ರೇಕಿಂಗ್ ನ್ಯೂಸ್
Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ…

ಇತ್ತೀಚಿನ ಸುದ್ದಿ

ಹೊಸಪೇಟೆ ಸಮೀಪ ಭೀಕರ ಸರಣಿ ಅಪಘಾತ: 4 ಸಾವು; 25 ಮಂದಿ ಗಂಭೀರ ಗಾಯ

19/04/2026, 13:58

ವಿಜಯನಗರ(reporterkarnataka.com): ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಡಣಾಪುರದಲ್ಲಿ ನಿಯಂತ್ರಣ ತಪ್ಪಿದ ಲಾರಿಯೊಂದು ಕಾರು, ಸರ್ಕಾರಿ ಬಸ್ ಹಾಗೂ ಮೂರು ಬೈಕ್‌ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಸರಣಿ ಅಪಘಾತ ಸಂಭವಿಸಿದೆ.
ಈ ದುರ್ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಡಣಾಪುರದಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ನಾಲ್ವರು ಮೃತಪಟ್ಟಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಲಾರಿಯೊಂದು ಕಾರ್, ಸರ್ಕಾರಿ ಬಸ್ ಮತ್ತು ಮೂರು ಬೈಕ್‌ಗಳಿಗೆ ಡಿಕ್ಕಿ ಹೊಡೆದಿದೆ.
ಬೆಳ್ಳುಳ್ಳಿ ತುಂಬಿಕೊಂಡು ಹರಿಯಾಣದಿಂದ ಬಂದ ಲಾರಿಯೊಂದು ನಿಯಂತ್ರಣ ತಪ್ಪಿ ಮೊದಲಿಗೆ ಕಾರ್‌ಗೆ ಡಿಕ್ಕಿ ಹೊಡೆದಿದೆ. ನಂತ್ರ ಸರ್ಕಾರಿ ಬಸ್ ಹಾಗೂ ಮೂರು ಬೈಕ್‌ಗಳಿಗೆ ಡಿಕ್ಕಿ ಹೊಡೆದಿದೆ. ಬಳಿಕ ಲಾರಿ ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಅಪಘಾತದ ತೀವ್ರತೆ ಹೆಚ್ಚಾಗಿದೆ.
ಹೊಸಪೇಟೆಯಿಂದ ಚಿತ್ರದುರ್ಗದತ್ತ ತೆರಳುತ್ತಿದ್ದ ಸರ್ಕಾರಿ ಬಸ್‌ಗೆ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಸುಮಾರು 25 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


ಈ ಅಪಘಾತ ಸಂಭವಿಸಿದ ಸ್ಥಳದಲ್ಲಿ ಹೆದ್ದಾರಿ ದುರಸ್ತಿ ಹಾಗೂ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಒಂದೇ ಬದಿಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಇದೇ ಕಾರಣದಿಂದ ಅಪಘಾತ ಸಂಭವಿಸಿರಬಹುದೆಂದು ಶಂಕಿಸಲಾಗಿದೆ.
ಅಪಘಾತದ ಪರಿಣಾಮವಾಗಿ ಹೆದ್ದಾರಿಯಲ್ಲಿ ಎರಡೂ ಬದಿಗಳಲ್ಲಿ ಸುಮಾರು ಮೂರು ಕಿಲೋ ಮೀಟರ್‌ವರೆಗೆ ಸಂಚಾರ ದಟ್ಟಣೆ ಉಂಟಾಗಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಪೊಲೀಸರು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದು, ಟ್ರಾಫಿಕ್ ತಿಳಿಗೊಳಿಸಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು