12:48 PM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಮುಂಬೈನಲ್ಲಿ ಘೋರ ದುರಂತ: ಭಾರೀ ಮಳೆಗೆ ಗುಡ್ಡ ಕುಸಿತ; 8 ಮಂದಿ ಜೀವಂತ ಸಮಾಧಿ; ಎನ್‌ಡಿಆರ್‌ಎಫ್ ಕಾರ್ಯಾಚರಣೆ

12/08/2026, 18:29

ಮುಂಬೈ(reporterkarnataka.com): ಭಾರೀ ಮಳೆಯಿಂದಾಗಿ ಗುಡ್ಡ ಕುಸಿದು ಸಂಭವಿಸಿದ ಭೀಕರ ದುರಂತದಲ್ಲಿ 8 ಮಂದಿ ಮೃತಪಟ್ಟಿದ್ದು, ಹಲವರು ಮಣ್ಣಿನಡಿ ಸಿಲುಕಿರುವ ಘಟನೆ ಮಹಾರಾಷ್ಟ್ರದ ರಾಜಧಾನಿ ಮುಂಬೈನಲ್ಲಿ ನಡೆದಿದೆ.
ಕುರ್ಲಾ ವೆಸ್ಟ್‌ನ ಚಿರಾಗ್ ನಗರ, ಗೌಶಿಯಾ ಚಾಲ್ ಪ್ರದೇಶದಲ್ಲಿ ಬುಧವಾರ ಮುಂಜಾನೆ ಸುಮಾರು 3:48ಕ್ಕೆ ಏಕಾಏಕಿ ಗುಡ್ಡ ಕುಸಿದಿದೆ. ಈ ವೇಳೆ ಎರಡು ಮನೆಗಳು ಸಂಪೂರ್ಣವಾಗಿ ಧ್ವಂಸಗೊಂಡಿದ್ದು, ಅವಶೇಷಗಳಡಿ ಸಿಲುಕಿ 8 ಮಂದಿ ಮೃತಪಟ್ಟಿದ್ದಾರೆ. ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.ವಿಷಯ ತಿಳಿಯುತ್ತಿದ್ದಂತೆ ಮುಂಬೈ ಅಗ್ನಿಶಾಮಕ ದಳ, ಎನ್‌ಡಿಆರ್‌ಎಫ್ (NDRF), ಪೊಲೀಸರು ಹಾಗೂ ಬಿಎಂಸಿ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.ಸ್ಥಳೀಯರು ಹಾಗೂ ಪ್ರತ್ಯಕ್ಷದರ್ಶಿಗಳ ಪ್ರಕಾರ, ಅವಶೇಷಗಳಡಿ ಇನ್ನೂ 6ರಿಂದ 8 ಮಂದಿ ಸಿಲುಕಿರುವ ಸಾಧ್ಯತೆ ಇದೆ. ಸಿಲುಕಿರುವವರನ್ನು ಸುರಕ್ಷಿತವಾಗಿ ಹೊರತೆಗೆಯಲು ಜೆಸಿಬಿಗಳು ಹಾಗೂ ವಿಶೇಷ ರಕ್ಷಣಾ ಉಪಕರಣಗಳನ್ನು ಬಳಸಿ ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.ಗಂಭೀರವಾಗಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಾಯಕಾರಿಯಾಗಿರುವ ಮನೆಗಳಲ್ಲಿದ್ದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕ ಎದುರಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು