5:45 AM Thursday15 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಹೊಸ ವರ್ಷಾಚರಣೆ: ಕಡಲ ನಗರಿಯ ಹಲವೆಡೆ ನಾಕಾಬಂಧಿ: 3 ಗಸ್ತು ಪಡೆಯಿಂದ ಕಣ್ಗಾವಲು

31/12/2022, 22:17

ಮಂಗಳೂರು(reporterkarnataka.com): ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ನಾನಾ ಕಡೆ ನಾಕಾಬಂಧಿ ಮಾಡಲಾಗಿದೆ. ವಾಹನ ಚಾಲಕನ್ನು ಮದ್ಯಪಾನ ತಪಾಸಣೆಗೆ ಒಳಪಡಿಸಲಾಗುತ್ತಿದೆ.

ನಾಕಾಬಂಧಿ ಹಿನ್ನೆಲೆಯಲ್ಲಿ ಸ್ವತಃ ಪೊಲೀಸ್ ಕಮಿಷನರ್ ಶಶಿಕುಮಾರ್ ಅವರೇ ಫೀಲ್ಡಿಗಿಳಿದಿದ್ದಾರೆ. ಸರ್ಕಿಟ್ ಹೌಸ್, ಕುಂಟಿಕಾನ ಸೇರಿದಂತೆ ಆಯಕಟ್ಟಿನ ಜಾಗದಲ್ಲಿ ನಾಕಾಬಂಧಿ ಹಾಕಲಾಗಿದೆ. ಹೊಸವರ್ಷಾಚರಣೆ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಡಳಿತ ಈಗಾಗಲೇ ಮಾರ್ಗಸೂಚಿ ಪ್ರಕಟಿಸಿದೆ.
ದ.ಕ.ಜಿಲ್ಲೆಯಲ್ಲಿ ಡಿ.31 ಮತ್ತು ಜ.1ಕ್ಕೆ ಅನ್ವಯವಾಗುವಂತೆ ಜಿಲ್ಲಾಡಳಿತವು ಪ್ರತ್ಯೇಕ ಮಾರ್ಗಸೂಚಿ ಹೊರಡಿಸಿದೆ.

ಹೊಸ ಮಾರ್ಗಸೂಚಿ ಪ್ರಕಾರ ನೋಂದಾಯಿತ/ಅಧಿಕೃತ ಕ್ಲಬ್, ಪಬ್, ರೆಸ್ಟೋರೆಂಟ್,ಹೊಟೇಲ್ ಗಳಲ್ಲಿ ನಿಯಮಗಳಿಗೆ ಒಳಪಟ್ಟು ರಾತ್ರಿ 12:30ರವರೆಗೆ ಸಂಭ್ರಮಾಚರಣೆಗೆ ಅನುಮತಿ ನೀಡಲಾಗಿದೆ.
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಧ್ವನಿವರ್ಧಕ/ವಿದ್ಯುನ್ಮಾನ ಉಪಕರಣಗಳನ್ನು ಮತ್ತು ಶಬ್ದ ಉಂಟುಮಾಡುವ ಉಪಕರಣಗಳನ್ನು ರಾತ್ರಿ 10ರ ಬಳಿಕ ಬಳಸುವಂತಿಲ್ಲ. ಈ ನಿಯಮಗಳಿಗೆ ಒಳಪಟ್ಟು ಕಾರ್ಯಕ್ರಮವನ್ನು ನಡೆಸಲು ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯುವಂತೆ ಆದೇಶಿಸಲಾಗಿದೆ.

ಸಭಾಂಗಣ, ತೆರೆದ ಸ್ಥಳ/ಹೊರಾಂಗಣ ಪ್ರದೇಶಗಳಾದ ಕಲ್ಯಾಣ ಮಂಟಪ, ಸಭಾ ಭವನ,ಸರ್ವೀಸ್ ಅಪಾರ್ಟೆಂಟ್, ಕಡಲತೀರ, ಹೋಂಸ್ಟೇ,ಮಾಲ್ ಇತ್ಯಾದಿ ತೆರೆದ ಪ್ರದೇಶಗಳಲ್ಲಿ ಡಿಜೆ/ಡಾಲ್ಟಿ ಡ್ಯಾನ್ಸ್ ಗಳನ್ನು ನಡೆಸುವಂತಿಲ್ಲ. ವಿಶೇಷ ಪಾರ್ಟಿ ಇತ್ಯಾದಿ ಆಯೋಜಿಸುವ ಮುನ್ನ ಕಡ್ಡಾಯವಾಗಿ ನಗರ ಸ್ಥಳೀಯ ಸಂಸ್ಥೆ/ಗ್ರಾಮೀಣ ಸ್ಥಳೀಯ ಸಂಸ್ಥೆ ಮತ್ತು ಪೊಲೀಸ್ ಇಲಾಖೆಯ ಅನುಮತಿ ಪಡೆಯಬೇಕು. ಆದರೆ ಧಾರ್ಮಿಕ ಕಾರ್ಯಕ್ರಮ ನಡೆಸಲು ಯಾವುದೇ ನಿರ್ಬಂಧ ಇರುವುದಿಲ್ಲ. ಧಾರ್ಮಿಕ ಕಾರ್ಯಕ್ರಮವನ್ನು ನಡೆಸುವ ಮೇಲ್ವಿಚಾರಕರು/ಆಯೋಜಕರು ಸರ್ವೋಚ್ಚ ನ್ಯಾಯಾಲಯದ ಆದೇಶಗಳಿಗೆ ಮತ್ತು ಸರಕಾರದ ನಿಯಮಾವಳಿಗೆ ಒಳಪಟ್ಟು ಕ್ರಮ ಕೈಗೊಳ್ಳಬೇಕು.

ದಿನನಿತ್ಯ ನಡೆಯುವ ಕ್ಲಬ್/ಪಬ್/ರೆಸ್ಟೋರೆಂಟ್ ಗಳ
ದೈನಂದಿನ ವ್ಯವಹಾರ ನಡೆಸಲು ಹಾಗೂ ಪರ್ಮಿಟ್ಟಂತೆ ನಿಗದಿತ ಸಮಯದೊಳಗೆ ಕಾರ್ಯಕ್ರಮ ಮುಕ್ತಾಯಗೊಳಿಸಬೇಕು ಎಂದು ಸೂಚಿಸಲಾಗಿದೆ.


3 ಗಸ್ತು ಪಡೆ ಅಧಿಕೃತ/ನೋಂದಾಯಿತ ಕೇಂದ್ರಗಳಲ್ಲಿ ಯಾವುದೇ ಸಂಶಯಾಸ್ಪದ ವ್ಯಕ್ತಿಗಳು ಅಥವಾ ಅಪರಿಚಿತರು, ಸಮಾಜಘಾತುಕ ಶಕ್ತಿಗಳು ಕಂಡು ಬಂದಲ್ಲಿ ತಕ್ಷಣ ಪೊಲೀಸ್ ಠಾಣೆಗೆ, ನಗರ ಪಾಲಿಕೆ, ಪ್ರವಾಸೋದ್ಯಮ ಇಲಾಖೆ, ಅಬಕಾರಿ ಇಲಾಖೆಗೆ ಮಾಹಿತಿ ನೀಡಬೇಕು. ಪೊಲೀಸ್ ಇಲಾಖೆ, ಪಾಲಿಕೆಯ ಅಧಿಕಾರಿಗಳು, ಪರಿಸರ ಮಾಲಿನ್ಯ ನಿಯಂತ್ರಣ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ಅಬಕಾರಿ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ ಮೂರು ತಂಡಗಳ ಗಸ್ತು ಪಡೆಯನ್ನು ರಚಿಸಲಾಗಿದೆ. ಮಂಗಳೂರು ಪಾಲಿಕೆಯ ಆಯುಕ್ತರ ಅಧ್ಯಕ್ಷತೆಯಲ್ಲಿ ಮಂಗಳೂರು ಪಾಲಿಕೆಯ ಆಯುಕ್ತರ ಅಧ್ಯಕ್ಷತೆಯಲ್ಲಿ ಎಲ್ಲಾ ಸರ್ವಿಸ್ ಅಪಾರ್ಟೆಂಟ್, ಹೊಟೇಲ್, ಪಬ್, ಸ್ಥಳೀಯ ಸಂಘ ಸಂಸ್ಥೆಗಳ ಅಧ್ಯಕ್ಷರು ಹೊಸ ವರ್ಷ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಎಂದು ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಮತ್ತು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು