8:38 PM Tuesday18 - November 2025
ಬ್ರೇಕಿಂಗ್ ನ್ಯೂಸ್
Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಹೊಸತಾಗಿ ಖರೀದಿಸಿ ಮನೆಯಲ್ಲೇ ಯುವತಿ ಆತ್ಮಹತ್ಯೆ: ಮೋಸ ಹೋದರೆ ಮನೆ ಖರೀದಿಯಲ್ಲಿ? ಕಿರುಕುಳ ನೀಡಿದರೇ ಬ್ಯಾಂಕ್ ಅಧಿಕಾರಿಗಳು?

09/06/2023, 11:16

ಮಂಗಳೂರು(reporterkarnataka.com): ಹೊಸತಾಗಿ ಖರೀದಿಸಿದ ಮನೆಯಲ್ಲೇ ಯುವತಿಯೊಬ್ಬರು ನೇಣಿ ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ತೊಕ್ಕೊಟ್ಟು ಸಮೀಪದ ಕುಂಪಲ ಬಳಿಯ ಚಿತ್ರಾಂಜಲಿ ನಗರದಲ್ಲಿ ನಡೆದಿದೆ.
ಸಾವಿಗೆ ಶರಣಾದ ಯುವತಿಯನ್ನು ಅಶ್ವಿನಿ ಬಂಗೇರ(25) ಎಂದು ಗುರುತಿಸಲಾಗಿದೆ. ರಾತ್ರಿ ಗೆಳತಿ ಜತೆ ಚಾಟ್ ಮಾಡಿದ್ದ ಅಶ್ವಿನಿ ಅವರು ಬೆಳಗ್ಗೆ ಗೆಳತಿ ಬಂದು ಬಾಗಿಲು ಹೊಡೆದು ನೋಡಿದಾಗ ಫ್ಯಾನ್ ಗೆ ಸೀರೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂತು. ಅಶ್ವಿನಿ ಅವರು ಬರೆದ ಡೆತ್ ನೋಟ್ ನಲ್ಲಿ ತಾನು ಮನೆ ಖರೀದಿಸಿ ಮೋಸ ಹೋಗಿದ್ದು, ಬ್ಯಾಂಕ್ ಅಧಿಕಾರಿಗಳು ಬಂದು ಪೀಡಿಸುತ್ತಿದ್ದರು ಎಂದು ಬರೆದಿದ್ದರು.
ಮೂಲತಃ ಬಂಟ್ವಾಳ ತಾಲೂಕಿನ ಫರಂಗಿಪೇಟೆಯವರಾದ ಅಶ್ವಿನಿ ಅವರು ವಿದೇಶದಲ್ಲಿ ಉದ್ಯೋಗದಲ್ಲಿದ್ದರು. ಒಂದೂವರೆ ತಿಂಗಳ ಹಿಂದೆಯಷ್ಟೇ ಊರಿಗೆ ಬಂದಿದ್ದ ಅವರು ಕುಂಪಲ ಸಮೀಪದ ಚಿತ್ರಾಂಜಲಿ ನಗರದಲ್ಲಿ ಮನೆ ಖರೀದಿಸಿದ್ದರು. ಜೂನ್ 3ರಂದು ಗೃಹ ಪ್ರವೇಶ ಮಾಡಿ ತಾಯಿ, ದೊಡ್ಡಮ್ಮ ಜತೆ
ನೆಲೆಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು