2:59 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

Hospete | ಹೆದ್ದಾರಿಯಲ್ಲಿ ಮರ್ಸಿಡಿಸ್‌ ಬೆಂಜ್‌ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು

13/06/2026, 13:07

ಹೊಸಕೋಟೆ(reporterkarnataka.com): ನೂತನವಾಗಿ ನಿರ್ಮಾಣವಾಗಿರುವ ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್‌ ವೇನಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ.
ಚಾಲಕನ ನಿಯಂತ್ರಣ ತಪ್ಪಿದ ಐಷಾರಾಮಿ ಬೆಂಜ್ ಕಾರೊಂದು ರಸ್ತೆ ಮಧ್ಯದ ಡಿವೈಡರ್‌ಗೆ ಬಲವಾಗಿ ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ಯುವತಿಯೊಬ್ಬರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ.
ಈ ದಾರುಣ ಘಟನೆಯು ಹೊಸಕೋಟೆ ಸಮೀಪದ ದೊಡ್ಡ ಹುಲ್ಲೂರು ಬಳಿ ನಡೆದಿದೆ. ವೇಗವಾಗಿ ಬಂದ ಮರ್ಸಿಡಿಸ್ ಬೆಂಜ್ ಕಾರು ಚಾಲಕನ ಹತೋಟಿ ತಪ್ಪಿ ರಸ್ತೆ ವಿಭಾಜಕಕ್ಕೆ (ಡಿವೈಡರ್) ಅಪ್ಪಳಿಸಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಒಳಗಿದ್ದ ಯುವತಿ ತೀವ್ರ ರಕ್ತಸ್ರಾವ ಹಾಗೂ ಗಂಭೀರ ಗಾಯಗಳಿಂದಾಗಿ ಅಪಘಾತದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದೆ. ಕಾರಿನಲ್ಲಿದ್ದ ಇತರರ ವಿವರಗಳು ಮತ್ತು ಅಪಘಾತಕ್ಕೆ ನಿಖರ ಕಾರಣ ಏನೆಂಬುದರ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು