3:33 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಹೊಸಪೇಟೆ: ಸಕ್ಕರೆ ಕಾರ್ಖಾನೆ ಪುನಾರಂಭಕ್ಕೆ ರೈತ ಸಂಘ ಆಗ್ರಹ; ಹೋರಾಟದ ಎಚ್ಚರಿಕೆ 

25/08/2022, 11:46

ವಿ.ಜಿ ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಹೊಸಪೇಟೆ ನಗರದಲ್ಲಿ  ತುಂಗಭದ್ರೆಯ ಭಾಗಿನಾ ಪೂಜೆಯನ್ನು ಅರ್ಪಿಸುವ ಕಾರ್ಯಕ್ರಮವನ್ನು ರೈತ ಸಂಘದ ರಾಜ್ಯಾಧ್ಯಕ್ಷರಾದ ವಾಸುದೇವ ಮೇಟಿ ಹಾಗೂ ವಿಜಯನಗರ ಜಿಲ್ಲಾಧ್ಯಕ್ಷರಾದ ಎಂ ಪ್ರಕಾಶ್
ನೇತೃತ್ವದಲ್ಲಿ  ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ನೂರಾರು ರೈತ ಮುಖಂಡರು ನಗರದ ಹೊಸಪೇಟೆ ನಗರದ ಡಾ. ಬಿ. ಆರ್. ಅಂಬೇಡ್ಕರ್ ರವರ ಪುತ್ತಳಿಗೆ, ಹೂಮಾಲೆಯನ್ನು ಹಾಕುವುದರ ಮೂಲಕ ಹೊಸಪೇಟೆ ನಗರದಲ್ಲಿರುವ ಸಕ್ಕರೆ ಕಾರ್ಖಾನೆಯನ್ನು ಮುಚ್ಚಿರುವುದರ ವಿರುದ್ಧ ಆಕ್ರೋಶ ವ್ಯಕ್ಯಪಡಿಸಿದರು. ಕಾರ್ಖಾನೆ ಮರು ಸ್ಥಾಪಿಸುವ ಸಲುವಾಗಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ರೈತ ಸಂಘದ ರಾಜ್ಯ ಉಪಾಧ್ಯಕ್ಷರಾದ ದೇವರ ಮನೆ ಮಹೇಶ್ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಪರಶುರಾಮಪ್ಪ, ಹಾಗೂ ಬಳ್ಳಾರಿ ಜಿಲ್ಲಾಧ್ಯಕ್ಷರಾದ ಹನುಮಂತಪ್ಪ, ಕೊಪ್ಪಳ ಜಿಲ್ಲಾ ಅಧ್ಯಕ್ಷರು ಸೇರಿದಂತೆ. ಜಿಲ್ಲೆಯ ವಿವಿದ  ಮಾತನಾಡಿದರು, ಹೊಸಪೇಟೆಯಲ್ಲಿ ಮುಚ್ಚಿರುವಂತಹ ಸಕ್ಕರೆ ಕಾರ್ಖಾನೆಯನ್ನು ಮರುಸ್ಥಾಪನೆ ಮಾಡಬೇಕು, ಇಲ್ಲವಾದಲ್ಲಿ ಸರ್ಕಾರದ ವಿರುದ್ಧ ದೊಡ್ಡಮಟ್ಟದ ಸತ್ಯಾಗ್ರಹ ಹೋರಾಟವನ್ನು ಮಾಡಲಾಗುವುದೆಂದು  ಅವರು ಸರ್ಕಾರಕ್ಕೆ ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದೆ

ಇತ್ತೀಚಿನ ಸುದ್ದಿ

ಜಾಹೀರಾತು