10:00 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಹಾಸ್ಟೆಲ್ ನಲ್ಲಿ ಪಿಯು ವಿದ್ಯಾರ್ಥಿನಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ: ಸಿಬ್ಬಂದಿಗಳ ನಿರ್ಲಕ್ಷ್ಯ ಕಾರಣ; ಹೆತ್ತವರ ಆರೋಪ

09/03/2023, 10:41

ದಾವಣಗೆರೆ(reporterkarnataka.com): ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಸಮಾಜ ಕಲ್ಯಾಣ ಇಲಾಖೆ ನಡೆಸುವ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್ ನಲ್ಲಿ ನೇಣು ಬೀಗಿದುಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದ ದಾರುಣ ಘಟನೆ ಹರಿಹರ ಸಮೀಪ ನಡೆದಿದೆ.

ಡಾ. ಬಿಆರ್ ಅಂಬೇಡ್ಕರ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ, ದಾವಣಗೇರಿ ತಾಲೂಕಿನ ಹೆಚ್ಚು ಬಸವಪುರ ನಿವಾಸಿ ವರ್ಷಾ (18) ಮೃತ ದುರ್ದೇವಿ. ಈಕೆ ಶಿವಣ್ಣ ಅವರ ಪುತ್ರಿ ಎಂದು ತಿಳಿದು ಬಂದಿದೆ.
ಮದ್ಯಾಹ್ನ ಸುಮಾರು 12ರ ಸಮಯದಲ್ಲಿ ಕೊಠಡಿಯ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ವರ್ಷಾ ಕಂಡು ಬಂದಿದ್ದಾಳೆ. ತಕ್ಷಣ ಹಾಸ್ಟೆಲ್ ಸಿಬ್ಬಂದಿ ಕೊಠಡಿ ಪ್ರವೇಶಿಸಿ ನೇಣು ಬಿಗಿದ ಸ್ಥಿತಿಯಲ್ಲಿದ್ದ ವರ್ಷಾಳನ್ನು
ಕೆಳಗಿಳಿಸಿ ನಗರದ ಸಾರ್ವಜನಿಕರ ಆಸ್ಪತ್ರೆಗೆ ಸಾಗಿಸಿದ್ದಾರೆ. ಪರೀಕ್ಷಿಸಿದ ವೈದ್ಯರು ವರ್ಷ ಮೃತಪಟ್ಟಿರುವದಾಗಿ ತಿಳಿಸಿರುತ್ತಾರೆ.

ವಿಷಯ ತಿಳಿದು ಆಸ್ಪತ್ರೆಗೆ ಆಗಮಿಸಿದ ವೃತ ವಿದ್ಯಾರ್ಥಿನಿಯ ಪೋಷಕರು ಮಗಳ ಸಾವಿಗೆ ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿಗಳ ನಿರ್ಲಕ್ಷವೇ ಕಾರಣ ಅವರನ್ನು ಕೂಡಲೇ ಅಮಾನತ್ತು ಪಡಿಸಬೇಕೆಂದು ಆಗ್ರಹಿಸಿದರು. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು