3:41 PM Wednesday24 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ ಯತ್ನ

24/06/2026, 15:41

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್ ಮಾಡಿ 30 ಲಕ್ಷಕ್ಕೆ ಬೇಡಿಕೆ ಇಟ್ಟ ಇಬ್ಬರು ಕಿರಾತಕರು ಹಣ ಸಿಗದಿದ್ದಾಗ ಮಹಿಳೆಯ ಫೋಟೋ ವನ್ನು ಇನ್ಸ್ಟಾ ಗ್ರಾಂನ ನಕಲಿ ಖಾತೆಯಲ್ಲಿ ಹರಿಬಿಟ್ಟು ಕಟ್ಟದಾಗಿ ಕಮೆಂಟ್ ಹಾಕಿದ ಹಿನ್ನೆಲೆಯಲ್ಲಿ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದೆ.
ಎಡಿಟ್ ಮಾಡಿದ ಫೋಟೋಗಳನ್ನ ಗೃಹಿಣಿ ಮೊಬೈಲ್ ಕಳಿಸಿ ಹಣಕ್ಕೆ ಡಿಮ್ಯಾಂಡ್ ಮಾಡಲಾಗಿತ್ತು.
ಹಣ ನೀಡದಿದ್ದರೆ ಫೋಟೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಕೂಡ ಹಾಕಿದ್ದರು. ಗೃಹಿಣಿ
ಹಣ ನೀಡದ ಹಿನ್ನೆಲೆಯಲ್ಲಿ ಇನ್ಸ್ಟಾ ಗ್ರಾಂ ನಲ್ಲಿ ನಕಲಿ ಖಾತೆ ತೆರದು ಫೋಟೋ ಹರಿಬಿಟ್ಟ ಕಿಡಿಗೇಡಿಗಳು 300ಕ್ಕೆ ಲಭ್ಯವಿದ್ದಾರೆ ಎಂದು ಬರೆದಿದ್ದರು.
ಸಾಮಾಜಿಕ ಜಾಲತಾಣದಲ್ಲಿ ತನ್ನ ಫೋಟೋ ನೋಡಿದ ಗೃಹಿಣಿ ಆತ್ಮಹತ್ಯೆಗೆ ಯತ್ನಿಸಿದ್ದರು. ಈ ಕುರಿತು
ಗೃಹಿಣಿಯ ಪತಿ ಲಕ್ಕವಳ್ಳಿ ಠಾಣೆಗೆ ದೂರು ನೀಡಿದ್ದಾರೆ.
ಗೃಹಿಣಿಗೆ ಮೆಸೇಜ್ ಮಾಡಿದ್ದು ಅದೇ ಗ್ರಾಮದ ಇಬ್ಬರು ಯುವಕರು ಎಂಬ ಆರೋಪ ಕೇಳಿ ಬರುತ್ತಿದೆ. ಬಾವಿಕೆರೆ ಗ್ರಾಮದ ಅಕ್ಷಯ್ ಹಾಗೂ ಸಾಹುಲ್ ಹಮೀದ್ ಎಂಬುವರ ಮೇಲೆ ಗೃಹಿಣಿ ಪತಿ ದೂರು ನೀಡಿದ್ದಾರೆ.
ಈ ಯುವಕರು ಹಿಂದೆ ಕೂಡ ಬೇರೆ ಮಹಿಳೆಗೂ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಈ ಕೆಲಸವೂ ಅವರದ್ದೇ ಎಂದು ಮೊಬೈಲ್ ಸಂಖ್ಯೆ ಸಮೇತ ಗೃಹಿಣಿ ಪತ್ನಿ ದೂರಿನಲ್ಲಿ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಎಡಿಟ್ ಫೋಟೋ ಹಾಕಿದವರ ವಿರುದ್ಧ ಕ್ರಮಕ್ಕೆ ಒತ್ತಾಯ ಕೇಳಿ ಬಂದಿದೆ.
ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಿಡಿಗೇಡಿಗಳ ಬಂಧನಕ್ಕೆ ಲಕ್ಕವಳ್ಳಿ ಪೊಲೀಸರು ಬಲೆ ಬೀಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು