1:25 PM Thursday3 - July 2025
ಬ್ರೇಕಿಂಗ್ ನ್ಯೂಸ್
ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ…

ಇತ್ತೀಚಿನ ಸುದ್ದಿ

ಎಚ್ ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶ ಪ್ರಾರಂಭ

15/05/2024, 21:22

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆಯ ಎಚ್ ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2024- 25ನೇ ಸಾಲಿನ ಪದವಿ ಹಾಗೂ ಸ್ನಾತಕೋತರ ಪದವಿಗಳಿಗೆ ಪ್ರವೇಶಗಳು ಪ್ರಾರಂಭವಾಗಿದ್ದು, ಕೂಡಲೇ ಅರ್ಜಿ ಸಲ್ಲಿಸುವಂತೆ ಪ್ರಾಂಶುಪಾಲ ಪ್ರೊ. ಬಿ ಎಸ್ ಮಂಜುನಾಥ್ ತಿಳಿಸಿದ್ದಾರೆ.
ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಂತ್ರಿಕ ಶಿಕ್ಷಣ ಇಲಾಖೆ ಮತ್ತು ದಾವಣಗೆರೆ ವಿಶ್ವವಿದ್ಯಾನಿಲಯದ ಅಡಿಯಲ್ಲಿ ಎಚ್ ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಾರ್ಯ ನಿರ್ವಹಿಸುತ್ತಿದ್ದು, ಕಾಲೇಜಿನಲ್ಲಿ ಉತ್ತಮ ಗುಣಮಟ್ಟದ ಬೋಧಕ ವರ್ಗವಿದ್ದು ವಿದ್ಯಾರ್ಥಿಗಳಿಗೆ ಕಲಿಯಲು ಉತ್ತಮ ಅನುಕೂಲಕರ ವಾತಾವರಣವಿದೆ. ಕಾಲೇಜಿನಲ್ಲಿ ಬಿಎ ಪದವಿ, ಬಿಎಸ್ಸಿ ಪದವಿ,ಬಿಸಿಎ ಪದವಿ ವಾಣಿಜ್ಯ ಮತ್ತು ನಿರ್ವಹಣಾ ಶಾಸ್ತ್ರ ಪದವಿ ಸ್ನಾತಕೋತ್ತರ ಪದವಿಗಳಾದ ಎಂಎ ಕನ್ನಡ ಎಂಎ ಸಮಾಜಶಾಸ್ತ್ರ ಎಂಕಾಂ ಪದವಿಗಳು ಕಾರ್ಯ ಆರಂಭಿಸಿದ್ದು ದ್ವಿತೀಯ ಪಿಯುಸಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳು ಅರ್ಜಿಗಳನ್ನು ಕಾಲೇಜಿನ ಸಮಯದಲ್ಲಿ ಪಡೆದು ದಾಖಲಾತಿ ಪಡೆಯಬೇಕು ಎಂದು ತಿಳಿಸಿದರು.

*ಬಿಸಿಎ ಪದವಿ ಕಡೆ ವಿದ್ಯಾರ್ಥಿಗಳ ಒಲವು:* ಇತ್ತೀಚಿನ ದಿನಗಳಲ್ಲಿ ಇಂಜಿನಿಯರಿಂಗ್ ಪದವಿ ಪಡೆಯಬೇಕು ಎಂಬ ಮಹತ್ವಾಕಾಂಕ್ಷೆ ಹೊಂದುವ ವಿದ್ಯಾರ್ಥಿಗಳು ಪ್ರವೇಶಾತಿ ಸಿಗದಿದ್ದ ಸಂದರ್ಭದಲ್ಲಿ ಬಿಸಿಎ ಪದವಿಯನ್ನು ಹೆಚ್ಚಾಗಿ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಇದರಿಂದಾಗಿ ಇಂಜಿನಿಯರಿಂಗ್ ಪದವಿ ಸಮಾನವಾಗಿ ಬಿಸಿಎ ಪದವಿಗೆ ಹೆಚ್ಚಿನ ಒತ್ತನ್ನು ವಿದ್ಯಾರ್ಥಿಗಳು ನೀಡುತ್ತಿದ್ದಾರೆ. ಹೆಚ್ಚಿನ ದಾಖಲಾತಿಗಳು ಬಿಸಿಎ ಪದವಿಗೆ ನಡೆಯುತ್ತಿವೆ ಎಂದು ಮಾಹಿತಿ ನೀಡಿದರು.
*ಪತ್ರಿಕೋದ್ಯಮ ಪದವಿಗೆ ಆಸಕ್ತಿ ತೋರದ ವಿದ್ಯಾರ್ಥಿಗಳು:* ಕಾಲೇಜಿನಲ್ಲಿ ಕಳೆದ ಸುಮಾರು ವರ್ಷಗಳಿಂದ ಪತ್ರಿಕೋದ್ಯಮ ಪದವಿ ಪ್ರಾರಂಭವಾಗಿದ್ದರೂ ಸಹ ವಿದ್ಯಾರ್ಥಿಗಳನ್ನು ಪತ್ರಿಕೋದ್ಯಮ ಪದವಿ ಆಕರ್ಷಿಸುವಲ್ಲಿ ಹಿಂದೆ ಬಿದ್ದಿದೆ. ಇದಕ್ಕೆ ಮುಖ್ಯ ಕಾರಣ ವಿದ್ಯಾರ್ಥಿಗಳಿಗೆ ಮಾಹಿತಿ ಕೊರತೆ ಹಾಗೂ ಪೋಷಕರ ಅಸಡ್ಡೆ ಕಾರಣವಾಗಿದೆ. ಪತ್ರಿಕೋದ್ಯಮ ಪದವಿ ಪಡೆದರೆ ಉದ್ಯೋಗ ದೊರೆಯುವುದಿಲ್ಲ ಎಂಬ ಕೀಳರಿಮೆಯಿಂದ ಹೊರ ಬಂದಾಗ ಮಾತ್ರ ವಿಷಯಕ್ಕೆ ಮನ್ನಣೆ ದೊರೆತಂತಾಗುತ್ತದೆ ಎಂಬುದು ಹಲವು ಮಾಧ್ಯಮದವರ ಹಾಗೂ ಉಪನ್ಯಾಸಕರ ನಿಲುವಾಗಿದೆ.
*ಕಾಲೇಜಿನಲ್ಲಿರುವ ಸೌಲಭ್ಯಗಳು:* ಮುಂದುವರೆದು ಮಾತಾಡಿದ ಪ್ರಾಂಶುಪಾಲ ಮಂಜುನಾಥ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಗ್ರಂಥಾಲಯವಿದ್ದು ವಿದ್ಯಾರ್ಥಿಗಳ ಅಧ್ಯಯನದ ಸಲುವಾಗಿ ಹೆಚ್ಚಿನ ಪುಸ್ತಕಗಳು ದೊರೆಯುತ್ತವೆ. ಪಿಎಚ್ ಡಿ ಪಡೆದಿರುವ ಉತ್ತಮ ಬೋಧಕ ವರ್ಗ ವಿಜ್ಞಾನ ಪ್ರಯೋಗಾಲಯಗಳು, ಡಿಜಿಟಲ್ ಲೈಬ್ರರಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಾಸ್ಟೆಲ್ ಸೌಲಭ್ಯ, ಸುಸಜ್ಜಿತ ಗಣಕಯಂತ್ರ ಕೊಠಡಿ, ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ, ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಕೌಶಲ್ಯ ಆಧಾರಿತ ತರಬೇತಿ ನೀಡಿ ಪ್ರಮಾಣ ಪತ್ರ ನೀಡುವುದು ಸೇರಿದಂತೆ ಹಲವು ಸೌಲಭ್ಯಗಳನ್ನು ಕಾಲೇಜು ವತಿಯಿಂದ ನೀಡಲಾಗುವುದು. ತಾಲೂಕಿನಾದ್ಯಾಂತ ಆರು ವಲಯಗಳನ್ನಾಗಿ ರೂಪಿಸಿ ಐದು ಜನ ಒಳಗೊಂಡ 6 ತಂಡಗಳನ್ನಾಗಿ ರಚಿಸಲಾಗಿದ್ದು, ಆ ತಂಡಗಳು ವಿವಿಧ ಪಿಯುಸಿ ಕಾಲೇಜುಗಳಿಗೆ ತೆರಳಿ ನಮ್ಮ ಕಾಲೇಜಿನಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಹಾಗೂ ಪ್ರಾಂಶುಪಾಲರಿಗೆ ಮಾಹಿತಿ ನೀಡಲಿದ್ದು ಹೆಚ್ಚಿನ ದಾಖಲಾತಿಗಳನ್ನು ಹೊಂದಲು ದಾಖಲಾತಿ ಆಂದೋಲನ ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಉಪನ್ಯಾಸಕರುಗಳಾದ ತಿಪ್ಪೇಸ್ವಾಮಿ, ಗಂಗಾಧರ್ ಕೆ., ಚಿತ್ತಯ್ಯ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು