4:33 AM Sunday11 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಹುಬ್ಬಳ್ಳಿ ಹಿಂಸಾಚಾರ ಪ್ರಕರಣ: 46ಕ್ಕೂ ಅಧಿಕ ಮಂದಿ ಪೊಲೀಸ್ ವಶಕ್ಕೆ; ನಿಷೇಧಾಜ್ಞೆ ಜಾರಿ

17/04/2022, 21:33

ಹುಬ್ಬಳ್ಳಿ(reporterkarnataka.com);
ಪ್ರಾರ್ಥನಾ ಮಂದಿರದ ಎಡಿಟೆಡ್ ಚಿತ್ರವನ್ನು ಯುವಕನೊಬ್ಬ ಸ್ಟೇಟಸ್ ನಲ್ಲಿ ಹಾಕಿದಕ್ಕೆ ಸಂಬಂಧಿಸಿದಂತೆ ಹುಬ್ಬಳಿಯಲ್ಲಿ ಶನಿವಾರ ತಡರಾತ್ರಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 46ಕ್ಕೂಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶನಿವಾರ ತಡರಾತ್ರಿ ಕಲ್ಲು ತೂರಾಟ ಕಲ್ಲು ತೂರಾಟ ನಡೆಸಲಾಗಿದೆ. ಸಮೀಪದ ಆಸ್ಪತ್ರೆಯ ಮೇಲೂ ದಾಳಿ ನಡೆಸಲಾಗಿದೆ. ಹಿಂಸಾಚಾರದಲ್ಲಿ ಸಂಚಾರಿ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿದಂತೆ 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಗಲಭೆಕೋರರನ್ನು ಚದುರಿಸಲು ಪೊಲೀಸರು ಆಶ್ರುವಾಯು ಪ್ರಯೋಗಿಸಿದ್ದರು .ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಇದು ವಿವಾದಕ್ಕೆ ಕಾರಣವಾದ ಪೋಸ್ಟ್‌ ಮಾಡಿದ್ದ ಆರೋಪದ ಮೇಲೆ ಅಭಿಷೇಕ್‌ ಹಿರೇಮಠ ಎಂಬವನನ್ನು ಪೊಲೀಸರು ಬಂಧಿಸಿದ್ದಾರೆ.

ಹಳೇ ಹುಬ್ಬಳ್ಳಿ ಪೊಲೀಸ್‌ ಠಾಣೆ ಸಮೀಪದಲ್ಲಿಯೇ ಕಲ್ಲುತೂರಾಟ ನಡೆದಿದ್ದು, ಸಮೀಪದ ಆಸ್ಪತ್ರೆ ಮೇಲೂ ದಾಳಿಯಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದರು. ಅಶ್ರುವಾಯು ಪ್ರಯೋಗಿಸಿದರು. ಘಟನೆಯಲ್ಲಿ ಪೊಲೀಸ್‌ ವಾಹನಗಳು ಜಖಂಗೊಂಡಿವೆ. ಕಲ್ಲು ತೂರಾಟದ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಯಂತ್ರಣ ಕ್ರಮವಾಗಿ ನಿಷೇಧಾಜ್ಞೆ ವಿಧಿಸಲಾಗಿದೆ.

ಪೊಲೀಸ್‌ ಕಮಿಷನರ್‌ ಲಾಭೂರಾಮ್‌ ಅವರು ಸಮುದಾಯದ ಮುಖಂಡರ ಜೊತೆ ಸಮಾಲೋಚನೆ ನಡೆಸಿ ಪರಿಸ್ಥಿತಿ ತಿಳಿಗೊಳಿಸುವ ಯತ್ನ ಮಾಡಿದರು. ಘಟನೆ ಹಿನ್ನೆಲೆಯಲ್ಲಿ ಹಳೇ ಹುಬ್ಬಳ್ಳಿಯಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ಘಟನೆ ನಡೆದ ಸುತ್ತಲಿನ ಪ್ರದೇಶದಲ್ಲಿದ್ದ ಬೈಕ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಲಾಭೂರಾಮ್‌ ತಡರಾತ್ರಿವರೆಗೆ ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನೀಡಿದರು.

ನಿಯೋಜನೆ: ನಗರದ ಪ್ರಮುಖ ಧಾರ್ಮಿಕ ಸ್ಥಳಗಳ ಎದುರು ಹೆಚ್ಚುವರಿ ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಭಾನುವಾರ ಹೊರ ಜಿಲ್ಲೆಗಳಿಂದಲೂ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ಕರೆಸಿಕೊಳ್ಳಲು ಪೊಲೀಸ್ ಇಲಾಖೆ ನಿರ್ಧರಿಸಿದೆ.

ಮುಂಜಾಗ್ರತಾ ಕ್ರಮವಾಗಿ ಭದ್ರಾವತಿಯ ಕ್ಷಿಪ್ರ ಕಾರ್ಯಾಚರಣೆ ಪಡೆಯನ್ನು ಕರೆಸಿಕೊಳ್ಳಲು ಪೊಲೀಸ್ ಇಲಾಖೆ ಮುಂದಾಗಿದೆ. ಭಾನುವಾರ ರಜೆ ಮೇಲೆ ಹೋದ ಸಿಬ್ಬಂದಿಗೂ ಕರ್ತವ್ಯಕ್ಕೆ ಮರಳಲು ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು