ಇತ್ತೀಚಿನ ಸುದ್ದಿ
ಹುಬ್ಬಳ್ಳಿ ಗಲಭೆಕೋರರನ್ನು ಗೂಂಡಾ ಕಾಯ್ದೆ, ಭಯೋತ್ಪಾದಕ ಕಾಯ್ದೆಯಡಿ ಬಂಧಿಸಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
17/04/2022, 20:50
ಹೊಸಪೇಟೆ(reporterkarnataka.com) : ಹುಬ್ಬಳ್ಳಿ ಗಲಭೆಕೋರರನ್ನು ಗೂಂಡಾ ಕಾಯ್ದೆ, ಭಯೋತ್ಪಾದಕ ಕಾಯ್ದೆಯಡಿ ಬಂಧಿಸಬೇಕೆಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ.
ಮುಸ್ಲಿಂ ಗೂಂಡಾಗಳು ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆ, ಆಸ್ಪತ್ರೆ ಹಾಗೂ ವಾಹನಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಆಪಾದಿಸಿದರು.
ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತಕ್ಷಣವೇ ಗಲಭೆ ಮಾಡಿದವರನ್ನು ಗೂಂಡಾ ಕಾಯ್ದೆ, ಭಯೋತ್ಪಾದಕ ಕಾಯ್ದೆ ಅಡಿ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.
ಯಾರೋ ಒಬ್ಬ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿರುವ ಚಿಕ್ಕ ಘಟನೆ ವಿಚಾರವಾಗಿ ಸಂಬಂಧಿಸಿದವರನ್ನು ಬಂಧಿಸಿ ಶಿಕ್ಷೆ ಕೊಡಬೇಕೆಂದು ಹೇಳಬೇಕಿತ್ತು. ಅದರೆ ಸರ್ಕಾರದ ವ್ಯವಸ್ಥೆಗೆ ಸವಾಲೊಡ್ಡುವ ಶಕ್ತಿಯನ್ನು ಸಹಿಸಿಕೊಳ್ಳಬಾರದು. ಸರ್ಕಾರ ಬಿಗಿ ಕ್ರಮ ಕೈಗೊಂಡು ಉಗ್ರ ಶಿಕ್ಷೆಗೆ ಒಳಪಡಿಸಬೇಕು ಎಂದರು.