ಇತ್ತೀಚಿನ ಸುದ್ದಿ
ಹುಬ್ಬಳ್ಳಿ: ಸೆ.26ರಂದು ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಪೌರ ಸನ್ಮಾನ
19/09/2022, 19:12
ಹುಬ್ಬಳ್ಳಿ(reporterkarnataka.com): ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಅವರಿಗೆ ಮಹಾನಗರ ಪಾಲಿಕೆ ವತಿಯಿಂದ ಸೆ. 26ರಂದು
ಪೌರ ಸನ್ಮಾನ ನೀಡಲಾಗುವುದು.
ಈ ಸಮಾರಂಭಕ್ಕೆ 5 ಸಾವಿರ ಮಂದಿಗೆ ಆಹ್ವಾನ ನೀಡಲಾಗುವುದು ಎಂದು ಹುಬ್ಬಳ್ಳಿ ಮೇಯರ್ ಈರೇಶ ಅಂಚಟಗೇರಿ ತಿಳಿಸಿದ್ದಾರೆ.
ದೇಶಪಾಂಡೆ ನಗರದ ಕರ್ನಾಟಕ ಜಿಮ್ಖಾನ ಮೈದಾನದಲ್ಲಿ ಸಮಾರಂಭ ಏರ್ಪಡಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ರಾಜ್ಯ ಸಚಿವರಾದ ಹಾಲಪ್ಪ ಆಚಾರ, ಶಂಕರ ಪಾಟೀಲ ಮುನೇನಕೊಪ್ಪ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಪ್ರಸಾದ ಅಬ್ಬಯ್ಯ, ಅರವಿಂದ ಬೆಲ್ಲದ, ಅಮೃತ ದೇಸಾಯಿ, ಕುಸುಮಾವತಿ ಶಿವಳ್ಳಿ, ಸಿ.ಎಂ. ನಿಂಬಣ್ಣವರ ಹಾಗೂ ಪಾಲಿಕೆ ಸದಸ್ಯರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ’ ಎಂದರು.
‘ಅವಳಿನಗರದ ಮಾಜಿ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಹಾನಗರ ಪಾಲಿಕೆಯ ಮಾಜಿ ಸದಸ್ಯರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಸೇರಿದಂತೆ ಸುಮಾರು ಐದು ಸಾವಿರ ಮಂದಿಗೆ ಸಮಾರಂಭಕ್ಕೆ ಆಹ್ವಾನ ನೀಡಲಾಗುವುದು. ಜೊತೆಗೆ, 500 ಪೌರ ಕಾರ್ಮಿಕರಿಗೂ ಸಮಾರಂಭದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗುವುದು’ ಎಂದು ತಿಳಿಸಿದರು.