3:08 AM Thursday1 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಹುಬ್ಬಳ್ಳಿಯಲ್ಲಿ ಕಣ್ಣೀರು ಸುರಿಸಿದ ಮುಖ್ಯಮಂತ್ರಿ ಬೊಮ್ಮಾಯಿ !!: ಅಷ್ಟಕ್ಕೂ ಸಿಎಂ ದುಃಖಿಸಿದ್ದು ಯಾಕಾಗಿ? 

17/09/2021, 19:11

ಹುಬ್ಬಳ್ಳಿ(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಕ್ಕಿ ಬಿಕ್ಕಿ ಅತ್ತ ಘಟನೆ ನಡೆಯಿತು. ತನ್ನ ಬಾಲ್ಯ ಸ್ನೇಹಿತ ಹಾಗೂ ಸೋದರ ಸಂಬಂಧಿ ರಾಜು ಪಾಟೀಲ್ ಅವರ ಪಾರ್ಥಿವ ಶರೀರದ ಮುಂದೆ ಮುಖ್ಯಮಂತ್ರಿ ಕಣ್ಣೀರ ಕೋಡಿ ಹರಿಸಿದರು.

ಬುಧವಾರ ನಿಧನರಾದರು ರಾಜು ಪಾಟೀಲ್ ಅವರ ಅಂತಿಮಕ್ರಿಯೆಗೆ ಹುಬ್ಬಳ್ಳಿ ನಿವಾಸಕ್ಕೆ ಆಗಮಿಸಿದ ಬೊಮ್ಮಾಯಿ ಅವರು ರಾಜು ಪಾಟೀಲ್ ಜತೆಗಿನ ಬಾಲ್ಯದ ದಿನಗಳನ್ನು ನೆನೆದು ಕಣ್ಣೀರು ಹರಿಸಿದರು. ಮುಖ್ಯಮಂತ್ರಿ ಅಳುವುದನ್ನು ಕಂಡು ಅಕ್ಕಪಕ್ಕದಲ್ಲಿದ್ದವರ ಕಣ್ಣಂಚು ಕೂಡ ತೇವಗೊಂಡಿತು. ಬೊಮ್ಮಾಯಿ ಅವರು ಬೆಂಗಳೂರಿನಿಂದ ಹುಬ್ಬಳ್ಳಿಯ ಶಕ್ತಿನಗರದಲ್ಲಿರುವ ರಾಜು ಪಾಟೀಲರ ಮನೆಗೆ ಪತ್ನಿ ಮತ್ತು ಪುತ್ರನ ಜತೆ ಆಗಮಿಸಿದ್ದರು. ಮನೆಯ ಮುಂಭಾಗದಲ್ಲಿ ಕುಳಿತು ಮಾತನಾಡಿದ್ದು, ಆಟವಾಡಿದನ್ನು ಸಿಎಂ ನೆನಪಿಸಿಕೊಂಡು ಗದ್ಗದಿತರಾದರು.

ಇತ್ತೀಚಿನ ಸುದ್ದಿ

ಜಾಹೀರಾತು