4:53 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಹೂಡಿಕೆದಾರರ ಸಮಾವೇಶ: ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಎಚ್ ಡಿಕೆ, ಜೋಶಿಗೆ ಖುದ್ದು ಆಹ್ವಾನ ನೀಡಿದ ಸಚಿವ ಎಂ.ಬಿ.ಪಾಟೀಲ್

04/02/2025, 22:30

ನವದೆಹಲಿ(reporterkarnataka.com): ಇದೇ 11ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಬರುವಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ, ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ, ಪ್ರಹ್ಲಾದ ಜೋಶಿ, ವಿ.ಸೋಮಣ್ಣ ಮತ್ತು ಶೋಭಾ ಕರಂದ್ಲಾಜೆ ಅವರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ. ಬಿ. ಪಾಟೀಲ್ ಅವರು ಮಂಗಳವಾರ ಅಧಿಕೃತವಾಗಿ ಆಹ್ವಾನಿಸಿದ್ದಾರೆ.
ಮೊದಲಿಗೆ ಸೋಮಣ್ಣ ಅವರ ನಿವಾಸಕ್ಕೆ ಭೇಟಿ ಮಾಡಿದ ಸಚಿವರು, ನಂತರ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದರು. ಅಲ್ಲಿಂದ ಜೋಶಿ ಅವರ ಸಂಸತ್ತಿನ ಕಚೇರಿಗೆ ತೆರಳಿದ ಪಾಟೀಲರು, ಅವರ ಕಚೇರಿಯಲ್ಲಿ ಸಮಾವೇಶ ಕುರಿತು ರಾಜ್ಯದ ನಾಯಕರೊಂದಿಗೆ ಸಭೆ ನಡೆಸಿದರು.
ಬಳಿಕ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಕಂಡ ಅವರು, ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಆಗಮಿಸುವಂತೆ ಆಮಂತ್ರಣ ನೀಡಿದರು.
ಪಾಟೀಲ್ ಅವರು ಬುಧವಾರ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಇತರ ಕೇಂದ್ರ ಸಚಿವರನ್ನು ಖುದ್ದಾಗಿ ಭೇಟಿ ಮಾಡಿ, ಸಮಾವೇಶಕ್ಕೆ ಆಹ್ವಾನಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು