4:29 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

Hugh Level Meeting With IT & BT | ಇ-ಆಡಳಿತದ ಮೂಲಕ ನಾಗರಿಕ ಸೇವೆಗಳ ಹೆಚ್ಚಳ: ಸಚಿವ ಪ್ರಿಯಾಂಕ್ ಖರ್ಗೆ

17/02/2025, 21:39

ಬೆಂಗಳೂರು(reporterkarnataka.com): ಕರ್ನಾಟಕವು ಭಾರತದ ತಂತ್ರಜ್ಞಾನ ಮತ್ತು ಇನ್ನೋವೇಶನ್ ಹಬ್ ಎಂದು ಗುರುತಿಸಿಕೊಂಡಿದ್ದು, ಡಿಜಿಟಲ್ ಆಡಳಿತದಲ್ಲಿ ಮುಂಚೂಣಿಯಲ್ಲಿದೆ. ರಾಜ್ಯ ಸರ್ಕಾರಗಳು, ಸಾರ್ವಜನಿಕ ಮತ್ತು ಖಾಸಗಿ ಮಧ್ಯಸ್ಥಗಾರರ ಆಡಳಿತದಲ್ಲಿ ಜಾಗತಿಕ ಹಾಗೂ ನವೀನ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವುದರಿಂದ ಇ-ಆಡಳಿತದಲ್ಲಿ ಮಹತ್ವದ ಬದಲಾವಣೆಯನ್ನು ತರಬಹುದಾಗಿದೆ. ಹಾಗಾಗಿ ಕರ್ನಾಟಕ ಸರ್ಕಾರ ಎನ್ಐಎಸ್ಜಿ (ನ್ಯಾಷನಲ್ ಇನ್ಸ್ಟಿಟ್ಯೂಟ್ ಫಾರ್ ಸ್ಮಾರ್ಟ್ ಗೌರ್ನಮೆಂಟ್) ಜೊತೆ ಸಹಯೋಗಕ್ಕೆ ಮುಂದಾಗಿದ್ದು, ಇದರಿಂದ ಇ-ಆಡಳಿತದ ಮೂಲಕ ನಾಗರಿಕ ಕೇಂದ್ರಿತ ಸೇವೆಗಳನ್ನು ಹೆಚ್ಚಿಸುವ ನಮ್ಮ ಪ್ರಯತ್ನಗಳು ಮತ್ತಷ್ಟು ಬಲಪಡಿಸುವಂತಾಗುತ್ತದೆ. ಕರ್ನಾಟಕದ ಅಗತ್ಯಗಳಿಗೆ ಅನುಗುಣವಾಗಿ ಸುಧಾರಿತ ಇ-ಆಡಳಿತ ಪರಿಹಾರಗಳನ್ನು ಸುಗಮಗೊಳಿಸಲು ಎನ್ಐಎಸ್ಜಿ ಸಂಸ್ಥೆಯ ಡಿಜಿಟಲ್ ತಂತ್ರಜ್ಞಾನ ನೆರವಾಗಲಿದೆ ಹಾಗೂ ಸಾರ್ವಜನಿಕ ಮೂಲಸೌಕರ್ಯವನ್ನು ಹೆಚ್ಚಿಸಲು ಸಹಾಯಕವಾಗಲಿದೆ, ಸೇವಾ ವಿತರಣಾ ದಕ್ಷತೆಯನ್ನು ಸುಧಾರಿಸಿ, ನಾಗರಿಕರಿಗೆ ನೇರವಾಗಿ ಪ್ರಯೋಜನವನ್ನು ನೀಡುವ ಎಐ- ಚಾಲಿತ ಆಡಳಿತ ಮಾದರಿಗಳನ್ನು ಸಂಯೋಜಿಸುವಲ್ಲಿ ನೆರವಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ಉ ಪಂಚಾಯತ್ ರಾಜ್ ಹಾಗೂ ನಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಎನ್ಐಎಸ್ಜಿಯ ಡಿಜಿಟಲ್ ಪರಿಣತಿಯೊಂದಿಗೆ ರಾಜ್ಯದ ಇ-ಆಡಳಿತದಲ್ಲಿ ಮಹತ್ವದ ಬೆಳವಣಿಗೆ ರೂಪಿಸುವ ಸಲುವಾಗಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಎನ್ಐಎಸ್ಜಿಯ ಹಿರಿಯ ಅಧಿಕಾರಿಗಳ ನಡುವೆ ನಾಗರಿಕ-ಕೇಂದ್ರಿತ ಸೇವಾ ವಿತರಣೆಯನ್ನು ಹೆಚ್ಚಿಸಲು ಮತ್ತು ಕರ್ನಾಟಕದ ಡಿಜಿಟಲ್ ರೂಪಾಂತರವನ್ನು ವೇಗಗೊಳಿಸಲು ಬೆಂಗಳೂರಿನಲ್ಲಿ ಫೆ.16ರಂದು ಸಭೆಯನ್ನು ಆಯೋಜಿಸಲಾಗಿತ್ತು.
ಆಡಳಿತದಲ್ಲಿ ಹೊಸ ಮಾನದಂಡಗಳನ್ನು ರೂಪಿಸಿ ಭವಿಷ್ಯದಲ್ಲಿ ಡಿಜಿಟಲ್ ಮೂಲಸೌಕರ್ಯವನ್ನು ನಿರ್ಮಿಸಲು ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಇದರಿಂದ ಕರ್ನಾಟಕಕ್ಕೆ ಹೆಚ್ಚಿನ ಪ್ರಯೋಜನ ಆಗುವುದರೊಂದಿಗೆ ಇತರ ರಾಜ್ಯಗಳಿಗೆ ಮಾದರಿಯಾಗಬಲ್ಲದು ಎಂದು ಈ ಸಂದರ್ಭದಲ್ಲಿ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಎನ್ಐಎಸ್ಜಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜೀವ್ ಬನ್ಸಾಲ್ ಮಾತನಾಡಿ ನವೀನ ಡಿಜಿಟಲ್ ತಂತ್ರಜ್ಞಾನಗಳನ್ನು ರೂಪಿಸುವ ಮೂಲಕ ಕರ್ನಾಟಕದ ಇ-ಆಡಳಿತದಲ್ಲಿ ಹೊಸ ಕ್ರಾಂತಿ ಸೃಷ್ಟಿಸಲು ಎನ್ಐಎಸ್ಜಿ ಬದ್ಧವಾಗಿದೆ. ನಾಗರಿಕ-ಕೇಂದ್ರಿತ ಸೇವಾ ವಿತರಣೆಯನ್ನು ಹೆಚ್ಚಿಸುವುದು, ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯವನ್ನು ಬಲಪಡಿಸುವುದು ಮತ್ತು ವಾಯುಯಾನ ಕ್ಷೇತ್ರ ಸೇರಿದಂತೆ ಉದಯೋನ್ಮುಖ ತಂತ್ರಜ್ಞಾನಗಳನ್ನು ಅನ್ವೇಷಿಸುವುದು ಸಚಿವ ಪ್ರಿಯಾಂಕ್ ಖರ್ಗೆ ಅವರ ಉದ್ದೇಶವಾಗಿದೆ. ಆ ನಿಟ್ಟಿನಲ್ಲಿ ನಾವು ಕಾರ್ಯೋನ್ಮುಖಗೊಂಡು ಕರ್ನಾಟಕದ ಸುಧಾರಿತ ಇ-ಆಡಳಿತಕ್ಕೆ ಮಹತ್ವದ ಕೊಡುಗೆ ನೀಡುತ್ತೇವೆ ಎಂದು ತಿಳಿಸಿದರು. ಸಭೆಯಲ್ಲಿ ಸಿಎಫ್ಒ ವೀರಾಜು ನಾಯ್ಡು, ಎನ್ಐಎಸ್ಜಿಯ ಯೋಜನಾ ಅಧಿಕಾರಿ ಸ್ಟೀನ್ ಅನುರಾಗ್ ಪ್ರಾಥಿಪತಿ ಅವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು