ಇತ್ತೀಚಿನ ಸುದ್ದಿ
ಹುಲಿ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ತೀವ್ರ ಗಾಯ; ಆಸ್ಪತ್ರೆಗೆ ದಾಖಲು
06/06/2023, 15:02
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕಾಫಿತೋಟದ ಕಾರ್ಮಿಕ ಮಹಿಳೆಯೊಬ್ಬರ ಮೇಲೆ ಹುಲಿ ದಾಳಿ ನಡೆಸಿದ ಘಟನೆ ಚಿಕ್ಕಮಗಳೂರು ತಾಲೂಕಿನ ಪಂಡರವಳ್ಳಿಯ ಕಾಫಿ ತೋಟದಲ್ಲಿ ನಡೆದಿದೆ.
ಹುಲಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಮಹಿಳೆ ಅಸ್ಸಾಂ ಮೂಲದವರಾಗಿದ್ದಾರೆ.
ಹುಲಿ ದಾಳಿಯಿಂದ ಮಹಿಳೆಯ ಹಣೆ ಮತ್ತು ಮುಖಕ್ಕೆ ಗಂಭೀರ ಗಾಯಗಳಾಗಿವೆ. ಕಾರ್ಮಿಕರು ಕೂಗಾಡುತ್ತಿದ್ದಂತೆ ಪರಾರಿಯಾದ ಹುಲಿ. ಗಾಯಾಳು ಮಹಿಳೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
8 ವರ್ಷದ ಹಿಂದೆ ಪಂಡರವಳ್ಳಿಯಲ್ಲಿ ಹುಲಿಗೆ ಮಹಿಳೆಯೊಬ್ಬರು ಬಲಿಯಾಗಿದ್ದರು. ಮತ್ತೆ ಹುಲಿ ದಾಳಿಯಾಗಿರುವುದು ಗ್ರಾಮಸ್ಥರಲ್ಲಿ ಆತಂಕ ಉಂಟು ಮಾಡಿದರು.
ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ತಪ್ಪಲಿನ ಪಂಡರವಳ್ಳಿ ಇದೆ.