6:47 PM Saturday14 - February 2026
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್…

ಇತ್ತೀಚಿನ ಸುದ್ದಿ

ಹುಲಿ ಉಗುರು ಪ್ರಕರಣ: ಅಮಾನತ್ತಿಗೊಳಗಾದ ಕಳಸ ಡಿಆರ್ ಎಫ್ ಓ ದರ್ಶನ್ ಬಂಧನ; ಎನ್. ಆರ್. ಪುರದಲ್ಲಿ ಸೆರೆ

27/10/2023, 22:35

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹುಲಿ ಉಗುರು ಧರಿಸಿದ ಆರೋಪದ ಮೇಲೆ
ತನಿಖೆಗೆ ಹಾಜರಾಗದ ಹಿನ್ನೆಲೆಯಲ್ಲಿ ಅಮಾನತಿಗೊಳಗಾದ
ಕಳಸದ ಉಪ ವಲಯ ಅರಣ್ಯಾಧಿಕಾರಿ (ಡಿ. ಆರ್.ಎಫ್. ಓ.) ದರ್ಶನ್ ಅವರನ್ನು ಬಂಧಿಸಲಾಗಿದೆ.
ದರ್ಶನ್ ಅವರನ್ನು ಎನ್.ಆರ್.ಪುರದಲ್ಲಿ ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ.


ಹುಲಿ ಉಗುರು ಧರಿಸಿದ್ದಾರೆ ಸೂಕ್ತ ಕ್ರಮ ಕೈಗೊಳ್ಳಿ ಎಂದು
ಅರಣ್ಯ ಇಲಾಖೆಯ ಉಪ ವಲಯ ಅರಣ್ಯಾಧಿಕಾರಿ ದರ್ಶನ್ ಅವರ ಮೇಲೆ ದೂರು ದಾಖಲಾಗಿತ್ತು. ವನ್ಯಜೀವಿ ಕಾಯ್ದೆಯಲ್ಲಿ ಪ್ರಕರಣ ದಾಖಲಿಸುವಂತೆ ದೂರು ನೀಡಲಾಗಿತ್ತು. ಕೊಪ್ಪ ಡಿ.ಎಫ್.ಓ. ದಿನೇಶ್ ಆದೇಶ ಹೊರಡಿಸಿದ್ದರು.
ಅರೆನೂರು ಗ್ರಾಮದ ಸುಪ್ರೀತ್ ಹಾಗೂ ಅಬ್ದುಲ್ ಎಂಬುವವರಿಂದ ದೂರು ದಾಖಲಾಗಿತ್ತು. ಆಲ್ದೂರು ವಲಯ ಅರಣ್ಯಾಧಿಕಾರಿಗೆ ಸುಪ್ರಿತ್ ಹಾಗೂ ಅಬ್ದುಲ್ ದೂರು ನೀಡಿದ್ದರು. ದರ್ಶನ್ ಅವರು ಚಿಕ್ಕಮಗಳೂರು ತಾಲೂಕಿನ ಆಲ್ದೂರು ಮೂಲದ ಅಧಿಕಾರಿ. ತನಿಖೆ ನಡೆಸಿ ಕ್ರಮ ಕೈ ಗೊಳ್ಳುವಂತೆ ಲಿಖಿತ ದೂರು ನೀಡಿದ ಹಿನ್ನಲೆಯಲ್ಲಿ ಅದಿಕಾರಿ
ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು