1:40 AM Monday7 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಹುಲ್ಲೂರು ತಾಂಡಾ: ಅಪ್ರಾಪ್ತ ಬಾಲಕಿಯ ಅತ್ಯಾಚಾರ; ಆರೋಪಿಗಳನ್ನು ಗಲ್ಲಿಗೇರಿಸಲು ಆಗ್ರಹ

15/12/2021, 18:17

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಹುಲ್ಲೂರು ತಾಂಡದ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿದ್ದು, ಆರೋಪಿಗಳನ್ನು ಶೀಘ್ರವಾಗಿ ಬಂಧಿಸಬೇಕೆಂದು ರಾಷ್ಟ್ರೀಯ ಗೋರ್ ಬಂಜಾರ್ ಕ್ರಾಂತಿ ಸಮಿತಿ ವಿಜಯನಗರ ಜಿಲ್ಲಾ ಘಟಕ ಆಗ್ರಹಿಸಿದೆ. 

ಪ್ರಕರಣ ವಿಜಯಪುರದ ಮಹಿಳಾ ಪೋಲಿಸ್ ಠಾಣೆಯಲ್ಲಿ ದೂರನ್ನು ದಾಖಲಿಸಲಾಗಿದೆ, ಆದರೆ ಆರೋಪಿಗಳನ್ನು ಬಂಧಿಸಿಲ್ಲ ಎಂದು ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದರು.

ಸಂಬಂಧಿಸಿದಂತೆ ಸೂಕ್ತ ಕ್ರಮಕ್ಕಾಗಿ ಮುಖ್ಯಮಂತ್ರಿಗಳಿಗೆ ಅವರು ಹಕ್ಕೊತ್ತಾಯ ಮಾಡಿದ್ದಾರೆ. ಹಕ್ಕೋತ್ತಾಯ ಪತ್ರವನ್ನು ಪದಾಧಿಕಾರಿಗಳು ಕೂಡ್ಲಿಗಿ ತಹಶಿಲ್ದಾರರಾದ ಟಿ.ಜಗಧೀಶರವರಿಗೆ ನೀಡಿದ್ದಾರೆ.

ಸಮಿತಿ ಮುಖಂಡರು ಮಾತನಾಡಿ,ಈ ಕೃತ್ಯದಲ್ಲಿ ಭಾಗಿಯಾದರೆನ್ನಲಾದ ಸಂಜು ಹುಲ್ಲೂರ ಮತ್ತು ಇತರರನ್ನು, ಈ ಕೂಡಲೆ ಬಂಧಿಸಿ ಕಾನೂನಾತ್ಮಕ ಕ್ರಮಗಳನ್ನು ಜರುಗಿಸಿ ಕೂಡಲೆ ಗಲ್ಲು ಶಿಕ್ಷೆ ನೀಡಲು ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಸಂತ್ರಸ್ತ ಯುವತಿಯ ಕುಟುಂಬಕ್ಕೆ ಸರ್ಕಾರದಿಂದ ಹಾಗೂ ಜಿಲ್ಲಾಡಳಿತದಿಂದ ಕನಿಷ್ಠ 50 ಲಕ್ಷ ರೂಪಾಯಿ ಪರಿಹಾರವನ್ನು ನೀಡಬೇಕು. ನಿರ್ಲಕ್ಷ್ಯ ತೋರಿದ್ದಲ್ಲಿ ಸಮಿತಿ ರಾಜ್ಯಾದ್ಯಂತ ತೀವ್ರ ಹೋರಾಟವನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗುತ್ತಿದೆ ಪದಾಧಿಕಾರಿಗಳು ಎಚ್ಚರಿಸಿದರು.

ರಾಷ್ಟ್ರೀಯ ಗೋರ್ ಬಂಜಾರ ಕ್ರಾಂತಿ ವಿಜಯನಗರ ಜಿಲ್ಲಾ ಸಮಿತಿ ಅಧ್ಯಕ್ಷ ಕೆ.ಶಿವಕುಮಾರ್,ಉಪಾಧ್ಯಕ್ಷ ಎಲ್.ವಿನಾಯಕ ಎಲ್ ಎಸ್ ಮಾತನಾಡಿದರು. ಸಮಿತಿ ಪದಾಧಿಕಾರಿಗಳು ಹಾಗೂ ಕೂಡ್ಲಿಗಿ ತಾಲ್ಲೂಕಿನ ಪದಾಧಿಕಾರಿಗಳು. ವಿಧ್ಯಾರ್ಥಿಗಳಾದ ಅಕ್ರಮ ಭಾಷಾ. ಗುರುರಾಜ್. ನಾಗರಾಜ್,  ಮಹೇಶ್, ಪ್ರಜ್ವಲ್, ಬಸವರಾಜ್,  ಅಜಯ್ ಪರಶುರಾಮ್, ವಿನೋದ್, ಮಂಜುನಾಥ್. ಇನ್ನಿತರ ವಿಧ್ಯಾರ್ಥಿಗಳು ಹಾಜರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು