11:55 AM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಹುಣಸಗಿ: ವಿದ್ಯಾರ್ಥಿಗಳಿಂದ ಕೆಎಸ್ಸಾರ್ಟಿಸಿ ಬಸ್ ತಡೆದು ಪ್ರತಿಭಟನೆ; ಸಾರ್ವಜನಿಕರ ಸಾಥ್

28/11/2024, 20:55

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಬಸ್ ಸರಿಯಾದ ವೇಳೆಗೆ ಬಾರದನ್ನು ವಿರೋಧಿಸಿ
ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಮಾರನಾಳ ತಾಂಡ ಕ್ರಾಸ ಬಳ್ಳಿ ಕೆಎಸ್‌ಆರ್‌ಟಿಸಿ ಬಸ್ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.


ಸರಿಯಾದ ಸಮಯಕ್ಕೆ ಬಸ್ ಬರದೇ ಇರುವ ಕಾರಣಕ್ಕೆ ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಸಮಯಕ್ಕೆ ಬರುವ ಬಸ್ಸುಗಳು ಬೇರೆ ಸಮಯಕ್ಕೆ ವರ್ಗಾಯಿಸಿರುವುದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗುತ್ತಿದೆ. ನಮ್ಮ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ. ಸರಿಯಾದ ಸಮಯಕ್ಕೆ ಬಸುಗಳು ಒದಗಿಸಿ ಕೊಡಿ. ಪ್ರತಿ ವರ್ಷವೂ ಮನವಿ ಮಾಡುತ್ತಲೇ ಬರುತ್ತಿದ್ದೇವೆ.
ಅದರೆ ಯಾರು ಇದರ ವಿಚಾರವಾಗಿ ಗಂಭೀರವಾಗಿ ತಗೆದುಕೊಳ್ಳುತ್ತಿಲ್ಲ. ಇದು ನಮ್ಮ ಕೊನೆಯ ಮಾನವಿ ಎಂದು ವಿದ್ಯಾರ್ಥಿಗಳು ಎಚ್ಚರಿಸಿದ್ದಾರೆ.
ವಿದ್ಯಾರ್ಥಿಗಳು ಹಾಗೂ ಪಾಲಕರು ಸೇರಿ ರಸ್ತೆ ತಡೆದು ಪ್ರತಿಭಟನೆ ಮಾಡುವಂತಾಗುತ್ತದೆ ಎಂದು ಕೆಎಸ್ಆರ್ಟಿಸಿ ಸುರಪುರ್ ಘಟಕದ ಮೇಲಧಿಕಾರಿಗಳಿಗೆ ದೂರವಾಣಿ ಮುಖಾಂತರ ವಿದ್ಯಾರ್ಥಿಗಳು ಅಳಿಲನ್ನು ತೋರಿಕೊಂಡರು. ಅದನ್ನು ಆಲಿಸಿದ ಮೇಲಾಧಿಕಾರಿಯು ಖಂಡಿತ ಸರಿಯಾದ ಸಮಯಕ್ಕೆ ತಮಗೆ ಬಸ್ಸು ಒದಗಿಸುವುದಾಗಿ ಭರವಸೆಯನ್ನು ನೀಡಿದರು .
ಇದೇ ಸಂದರ್ಭದಲ್ಲಿ ಕೊಡೆಕಲ್ ಹೋಬಳಿಯ ಉಪ ತಹಶೀಲ್ದಾರ್ರಾದ ಕಲ್ಲಪ್ಪ ಜಂಜಿಗಡ್ಡಿ, ನಾರಾಯಣಪುರ ಸಂಚಾರಕ ನಿಯಂತ್ರಕರಾದ ಅಶೋಕ್ , ನಾರಾಯಣಪುರ ಪೊಲೀಸ್ ಠಾಣೆ ಎ.ಎಸ್.ಐ ಸುಭಾಷ್ ಚಂದ್ರ, ರಿಯಾಜ್ ಸಿಬ್ಬಂದಿ ಹಾಗೂ ಕೊಡೆಕಲ್ ಪೊಲೀಸ್ ಠಾಣೆ ಎ.ಎಸ್.ಐ ಸಂಗಪ್ಪ, ಸಿಬ್ಬಂದಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು