9:39 AM Monday12 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ

19/01/2026, 11:49

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಹುಣಸೂರಿನ ಸ್ಕೈ ಗೋಲ್ಡ್ ಅಂಡ್ ಡೈಮಂಡ್ ಚಿನ್ನಾಭರಣ ಅಂಗಡಿ ದರೋಡೆ ಪ್ರಕರಣ ಸಂಬಂಧಿಸಿದಂತೆ ಬಿಹಾರ ಮೂಲದ ಇಬ್ವರು ಅಂತರ್ ರಾಜ್ಯ ದರೋಡೆ ಕೋರರ ಬಂಧಿಸಲಾಗಿದೆ.
ಹುಣಸೂರು ಪೊಲೀಸ್ ಹಾಗೂ ಬಿಹಾರ ಎಸ್ ಟಿ ಎಫ್ ತಂಡದ ವಿಶೇಷ ಕಾರ್ಯಾಚರಣೆ ನಡೆಸಿ ಬಿಹಾರದ ದರ್ಬಾಂಗ್ ನ ಬಾಗಲ್ಪರದ ವಿವಿಧೆಡೆ ದಾಳಿ ನಡೆಸಿ ಖರಾರಿ ನಿವಾಸಿ ರಿಷಿಕೇಶ್ ಸಿಂಗ್ ಅಲಿಯಾಸ್ ಛೋಟು ಸಿಂಗ್ ಹಾಗೂ ಪಕ್ರಾ ಗ್ರಾಮದ ಪಂಕಜ್ ಕುಮಾರ್ ಎಂಬವರನ್ನು ಬಂಧಿಸಿದ್ದಾರೆ.
ಡಿ.28ರ ಮಧ್ಯಾಹ್ನ ಪಿಸ್ತೂಲ್ ತೋರಿಸಿ. ಗಾಳಿಯಲ್ಲಿ ಗುಂಡು ಹಾರಿಸಿ. ಹುಣಸೂರು ಬೈಪಾಸ್ ರಸ್ತೆಯ ಚಿನ್ನಾಭರಣ ಅಂಗಡಿಯಲ್ಲಿ ಬರೋಬರಿ 10 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಖತರ್ನಾಕ್ ಖದೀಮರು ಇವರಾಗಿದ್ದಾರೆ.
ಬಿಹಾರ ಪೊಲೀಸರ ನೆರವಿನೊಂದಿಗೆ ನಡೆಸಿದ ಕಾರ್ಯಾಚರಣೆಯಲ್ಲಿ ಕೃತ್ಯಕ್ಕೆ ಬಳಸಿದ್ದ ಬೈಕ್, ಚಿನ್ನದ ಸರ, ಒಂದು ಲಕ್ಷ ರೂ. ನಗದು, ಆಭರಣ ಪೆಟ್ಟಿಗೆ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪಂಕಜ್ ಕುಮಾರ್ ವಿರುದ್ದ ಕರ್ನಾಟಕ, ಬಿಹಾರ, ರಾಜಸ್ತಾನ ಹಾಗೂ ಜಾರ್ಖಂಡ್ ರಾಜ್ಯಗಳಲ್ಲಿ ಕೊಲೆಯತ್ನ, ದರೋಡೆ, ಡಕಾಯಿತಿ ಸೇರಿದಂತೆ 16 ಪ್ರಕರಣ ದಾಖಲಾಗಿದೆ. ರಿಷಿಕೇಶ್ ಸಿಂಗ್ ವಿರುದ್ದ ಬಿಹಾರ, ಕರ್ನಾಟಕದಲ್ಲಿ ನಾಲ್ಕು ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು