5:57 AM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಹುರುಳಿ ಒಕ್ಕಣೆ ಎಫೆಕ್ಟ್?: ನಡು ರಸ್ತೆಯಲ್ಲೇ ಸುಟ್ಟು ಭಸ್ಮವಾದ ಕಾರು; ಪ್ರಯಾಣಿಕರು ಪಾರು

07/01/2025, 19:34

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಹುರುಳಿ ಒಕ್ಕಣೆಯ ಎಫೆಕ್ಟ್ ನಿಂದಾಗಿ ನಡುರಸ್ತೆಯಲ್ಲಿ ಕಾರು ಸುಟ್ಟು ಕರುಕಲಾಗಿ ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆಯು ನಂಜನಗೂಡು ಹಾಗೂ ಸರಗೂರು ತಾಲೂಕಿನ ಗಡಿಯಂಚಿನ ಯಶವಂತಪುರ ಗ್ರಾಮದ ಮುಖ್ಯರಸ್ತೆಯಲ್ಲಿ ನಡೆದಿದೆ.
ಸರಗೂರು ತಾಲೂಕಿನ ಪವಿತ್ರ ಧಾರ್ಮಿಕ ಕ್ಷೇತ್ರ ಶ್ರೀ ಬೇಲದಕುಪ್ಪೆ ಮಹದೇಶ್ವರ ಸ್ವಾಮಿ ದೇವಾಲಯಕ್ಕೆ ತೆರಳುವ ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಕೆ.ಆರ್.ನಗರದ ವ್ಯಕ್ತಿಗಳಿಗೆ
ಸೇರಿದ ಕಾರು ಎಂದು ಹೇಳಲಾಗಿದೆ.
ರಸ್ತೆ ಮಧ್ಯೆ ರಾಗಿ ಹಾಗೂ ಹುರುಳಿ ಒಕ್ಕಣೆ ಮಾಡುತ್ತಿರುವ ಹಿನ್ನಲೆ ಘಟನೆ ನಡೆದಿರಬಹುದೆಂದು ಶಂಕಿಸಲಾಗಿದೆ. ಕಾರಿಗೆ ಒಕ್ಕಣೆಗೆ ಹಾಕಿರುವ ಹುರುಳಿ ಸತ್ತೆ ಸಿಲುಕಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.ರಾತ್ರಿ ವೇಳೆ ಘಟನೆ ನಡೆದ ಕಾರಣ ಕಾರಿನಲ್ಲಿದ್ದ ಪ್ರಯಾಣಿಕರು ಅಸಹಾಯಕರಾಗಿದ್ದಾರೆ.
ಬೆಂಕಿ ಇಡೀ ಕಾರನ್ನೆ ಆವರಿಸಿ ಸುಟ್ಟು ಭಸ್ಮ ಮಾಡಿದೆ ಕಾರಿಗೆ ಬೆಂಕಿ ಹತ್ತಿಕೊಳ್ಳುತ್ತಿದ್ದಂತೆ ಮಹಿಳೆಯರು ಮಕ್ಕಳಾದಿಯಾಗಿ ಕಾರಿನಿಂದ ಇಳಿದು ಅದೃಷ್ಟ ವಸಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆ ನಡೆದ ನಂತರ ಒಕ್ಕಣೆ ಮಾಡಿರುವ ಕುರುಹನ್ನ ಅಳಿಸಿ ಹಾಕುವ ಯತ್ನ ನಡೆದಿದೆ ಎನ್ನಲಾಗಿದೆ. ಸದ್ಯ ರಾಜ್ಯ ಹೆದ್ದಾರಿಯಲ್ಲಿ ಕಾರು ಅನಾಥವಾಗಿ ಸುಟ್ಟು ಕರುಕಲಾದ ಸ್ಥಿತಿಯಲ್ಲಿ ನಿಂತಿರುವುದು ಮಾತ್ರ ವಿಷಾದನೀಯ.


ರಸ್ತೆಯಲ್ಲಿ ಈ ರೀತಿ ಹುರುಳಿ, ರಾಗಿ, ಭತ್ತ, ಸೇರಿದಂತೆ ವಿವಿಧ ದವಸ ಧಾನ್ಯಗಳನ್ನು ಒಕ್ಕಣೆ ಮಾಡುತ್ತಿರುವುದರಿಂದ ಇಂತಹ ದುರ್ಘಟನೆಗಳ ಜೊತೆಗೆ ಪ್ರಾಣವನ್ನು ಕಳೆದುಕೊಳ್ಳುತ್ತಿರುವ ಘಟನೆಗಳು ಆಗಿಂದ್ದಾಗ್ಗೆ ನಡೆಯುತ್ತಲೇ ಇವೆ.
ಇದರಿಂದಾಗಿ ನಾಗರೀಕರ ಜೀವಕ್ಕೆ ಬೆಲೆಯೇ ಇಲ್ಲದಂತಾಗಿದೆ. ಇದೆಲ್ಲವನ್ನೂ ಕಂಡು ಕಾಣದಂತಿರುವ ಸಂಬಂಧ ಪಟ್ಟ ಅಧಿಕಾರಿಗಳು ಮುಂದಾದರು ಇದಕ್ಕೆ ಕಡಿವಾಣ ಹಾಕಿ ಜನರ ಜೀವದ ರಕ್ಷಣೆಗೆ ಮುಂದಾಗಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು