8:56 AM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಇಡೀ ರಾಜ್ಯಕ್ಕೆ ಸುಭಿಕ್ಷೆ, ಶಾಂತಿ, ನೆಮ್ಮದಿ, ಮಳೆ- ಬೆಳೆ-ರೈತರ ಸಮೃದ್ಧಿಗಾಗಿ ಹಾಸನಾಂಬೆಗೆ ಪ್ರಾರ್ಥನೆ ಸಲ್ಲಿಸಿದ್ದೇನೆ: ಸಿಎಂ ಸಿದ್ದರಾಮಯ್ಯ

15/10/2025, 18:50

ಹಾಸನ(reporterkarnataka.com): ಹಾಸನಾಂಬೆ ಜಾತ್ರೆಯಲ್ಲಿ ಯಾವುದೇ ರೀತಿಯ VIP ಪ್ರತಿಷ್ಠೆಗೆ ಮಣೆ ಹಾಕದೆ, ಶ್ರೀಸಾಮಾನ್ಯರ ದರ್ಶನಕ್ಕೆ ಆಧ್ಯತೆ ನೀಡಿದ ಸರ್ಕಾರದ ಪ್ರಯತ್ನದ ಯಶಸ್ಸಿಗೆ ಸಹಕರಿಸಿದ ಜಿಲ್ಲೆಯ ಎಲ್ಲಾ ಪಕ್ಷದ ಜನಪ್ರತಿನಿಧಿಗಳಿಗೆ, ಅಧಿಕಾರಿ ವರ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದನೆ ಸಲ್ಲಿಸಿದರು.
ಹಾಸನಾಂಭ ದೇವಿ ಮತ್ತು ಸಿದ್ದೇಶ್ವರ ಸ್ವಾಮಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದರು.


ನಾನು ಕಳೆದ ವರ್ಷವೂ ದರ್ಶನ ಪಡೆದಿದ್ದೆ. ಈ ವರ್ಷವೂ ದರ್ಶನ‌ ಪಡೆದಿದ್ದೇನೆ. ಇಡೀ ರಾಜ್ಯಕ್ಕೆ ಸುಭಿಕ್ಷೆ, ಶಾಂತಿ, ನೆಮ್ಮದಿಗಾಗಿ, ಮಳೆ- ಬೆಳೆ-ರೈತರ ಸಮೃದ್ಧಿಗಾಗಿ ದೇವಿಗೆ ಪ್ರಾರ್ಥನೆ ಸಲ್ಲಿಸಿದ್ದೇನೆ ಎಂದರು.
ಈ ಬಾರಿ ಅಗತ್ಯಕ್ಕಿಂತ ಹೆಚ್ವು ಮಳೆ ಬಿದ್ದು ರೈತರಿಗೆ ಆಗಿರುವ ನಷ್ಟ ಭರಿಸಲು NDRF ನಿಧಿ ಜೊತೆಗೆ ರಾಜ್ಯ ಸರ್ಕಾರವೂ ಹೆಚ್ಚುವರಿ ಪರಿಹಾರ ನೀಡುತ್ತಿದ್ದೇವೆ. ಹಿಂದೆಂದೂ ಯಾರೂ ನೀಡದಷ್ಟು ಬೆಳೆ ಹಾನಿ ಪರಿಹಾರವನ್ನು ನಾವು ನೀಡಿದ್ದೇವೆ. ಮುಂದಿನ ವರ್ಷ ಬೆಳೆ ಹಾನಿ ಪರಿಸ್ಥಿತಿ ಬರದಿರಲಿ ಎಂದು ಹಾಸನಾಂಭ ಮತ್ತು ಸಿದ್ದೇಶ್ವರ ಸ್ವಾಮಿಯಲ್ಲಿ ಪ್ರಾರ್ಥಿಸಿದ್ದೇನೆ ಎಂದರು.
ನಮ್ಮದು ಕುವೆಂಪು ಅವರ ಆಶಯದ “ಸರ್ವ ಜನಾಂಗದ ಶಾಂತಿಯ ತೋಟ” ಆಗಿದೆ. ಇದನ್ನು ಇನ್ನಷ್ಟು ಗಟ್ಟಿಗೊಳಿಸೋಣ. ಎಲ್ಲಾ ಧರ್ಮದ ದೇವರ ಆಶಯವೂ ಮನುಷ್ಯ ಪ್ರೀತಿ ಮತ್ತು ಸೌಹಾರ್ದದ ಬದುಕು. ಇದಕ್ಕೆ ತಕ್ಕಂತೆ ನಾವೆಲ್ಲರೂ ಸಹೃದತೆಯಿಂದ ಮನುಷ್ಯ ಧರ್ಮವನ್ನು ಪಾಲಿಸಬೇಕು ಎಂದರು.

*ಅಗತ್ಯ ಬಿದ್ದರೆ ಹೆಚ್ಚುವರಿ ಅನುದಾನ:*
ಹಾಸನಾಂಭ ಜಾತ್ರೆಗೆ ಹೆಚ್ಚುವರಿ ಅನುದಾನವನ್ನು ರಾಜ್ಯ ಬಜೆಟ್ ನಲ್ಲಿ ಘೋಷಿಸುತ್ತೀರಾ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಜಿಲ್ಲಾಳಿತದ ಜೊತೆ ಚರ್ಚಿಸುತ್ತೇನೆ. ಅಗತ್ಯಬಿದ್ದರೆ ಅನುದಾನ, ಹಣಕಾಸಿನ ನೆರವು ನೀಡಲಾಗುವುದು ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ, ಶಾಸಕ ಶಿವಲಿಂಗೇಗೌಡರು, ಸಂಸದ ಶ್ರೇಯಸ್ ಪಟೇಲ್, ಹೂಡ ಅಧ್ಯಕ್ಷ ಶಿವಪ್ಪ ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು