9:17 PM Thursday17 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

‘ಐ ಲವ್ ಕುಡ್ಲ’ ಕಲಾಕೃತಿಯ ಲೋಕಾರ್ಪಣೆ: ಜಸ್ಟಿಸ್ ಸಂತೋಷ್ ಹೆಗ್ಡೆ ಅನಾವರಣ

08/01/2023, 22:21

ಮಂಗಳೂರು(reporterkarnataka.com): ಮಂಗಳೂರು ರಾಮಕೃಷ್ಣ ಮಠದ ಪ್ರೇರಣೆಯಿಂದ ಮುನ್ನಡೆಯುತ್ತಿರುವ ಸ್ವಚ್ಛ ಮಂಗಳೂರು ಫೌಂಡೇಶನ್ ವತಿಯಿಂದ ‘ಐ ಲವ್ ಕುಡ್ಲ’ ಎಂಬ ಕಲಾಕೃತಿಯನ್ನು ನಗರದ ಹಂಪನಕಟ್ಟೆಯಲ್ಲಿ
ಅನಾವರಣಗೊಳಿಸಲಾಯಿತು.

ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರ ಹಾಗೂ ಮಾಜಿ ಲೋಕಾಯುಕ್ತ ಜಸ್ಟಿಸ್ ಎನ್. ಸಂತೋಷ್ ಹೆಗ್ಡೆ ಅವರು ಕಲಾಕೃತಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿ, ಮಾನವನ ಅತಿ ಆಸೆಯೇ ಎಲ್ಲಾ ರೀತಿಯ ಪ್ರಕೃತಿನಾಶ ಹಾಗೂ ತ್ಯಾಜ್ಯ ಉತ್ಪತ್ತಿಗೆ ಕಾರಣವಾಗಿದೆ. ಸಂಪನ್ಮೂಲಗಳನ್ನು ಬೇಕಾದಷ್ಟೇ ಬಳಸಿದರೆ ಕಸದ ಹೊರೆ ಕಡಿಮೆಯಾಗುತ್ತದೆ. ಸ್ವಚ್ಛತೆಯನ್ನು ಸಾಧಿಸುವಲ್ಲಿಯೂ ಈ ಕಡಿಮೆ ಬಳಕೆಯ ಮಂತ್ರವನ್ನು ಪಾಲಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು.

ಮಹತ್ವಾಕಾಂಕ್ಷೆಯಿರುವುದು ತಪ್ಪಲ್ಲ ಆದರೆ ಹಣ, ವಸ್ತುಗಳನ್ನು ಹಾಗೂ ಸೇವೆಗಳನ್ನು ಪಡೆಯಲು ಯಾರನ್ನೂ ನೋಯಿಸದೇ ಇರುವುದೇ ನೈಜ ನಾಗರೀಕನ ಧರ್ಮ ಎಂದರು.
ಸ್ವಾರ್ಥರಹಿತ ಹಾಗೂ ಜವಾಬ್ದಾರಿಯುತ ನಾಗರಿಕರಿಂದ ಸ್ವಚ್ಛ ಸಮಾಜದ ನಿರ್ಮಾಣ ಸಾಧ್ಯ ಎಂದರು.

ಇನ್ನೋರ್ವ ಅತಿಥಿಗಳಾದ ಮಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಪಿ. ಸುಬ್ರಮಣ್ಯ ಯಡಪಡಿತ್ತಾಯ ಮಾತನಾಡಿ, ಮಂಗಳೂರಿನ ರಾಮಕೃಷ್ಣ ಆಶ್ರಮದ ಸ್ವಚ್ಛತಾ ಅಭಿಯಾನದ ಯಶಸ್ಸನ್ನು ಶ್ಲಾಘಿಸಿದರು. ಹಲವಾರು ಕಾರ್ಯಕರ್ತರ ಸ್ವಾರ್ಥ ರಹಿತ ಸೇವೆಯಿಂದ ಇಂಥಹಾ ಸಾಧನೆ ಸಾಧ್ಯವಾಗಿದೆ. ಎಲ್ಲಿ ಬದ್ದತೆ ಮತ್ತು ಸೇವೆ ಇರುತ್ತದೆಯೋ ಅಲ್ಲಿ ಮಹತ್ಕಾರ್ಯಗಳು ಆಗುತ್ತವೆ ಎಂದರು.

ರಾಮಕೃಷ್ಣ ಮಠದ ಸ್ವಾಮಿ ರಘು ರಾಮಾನಂದಜಿ, ಸಭಾ ಕಾರ್ಯಕ್ರಮ ಉದ್ಘಾಟಿಸಿ, ಆಶೀರ್ವಚನ ನೀಡಿದರು.
ಹಲವರ ಪ್ರಯತ್ನದ ಪರಿಣಾಮವಾಗಿರುವ ಸ್ವಚ್ಛ ಮಂಗಳೂರು ಅಭಿಯಾನ ಮುಂಬರುವ ದಿನಗಳಲ್ಲಿ ಇನ್ನಷ್ಟು ಉತ್ತಮ ರೀತಿಯಲ್ಲಿ ಯಶಸ್ವಿಯಾಗಲಿ ಎಂದು ಹಾರೈಸಿದರು.

ಕರ್ನಾಟಕ ವಿಧಾನ ಪರಿಷತ್ ಮಾಜಿ ಸದಸ್ಯ ಹಾಗು ಸ್ವಚ್ಚ ಮಂಗಳೂರು ಫೌಂಡೇಶನ್ ನ ಮಾರ್ಗದರ್ಶಕರಾದ ಕ್ಯಾ. ಗಣೇಶ್ ಕಾರ್ಣಿಕ್ ಆಶಯ ಭಾಷಣ ಮಾಡಿ ಸ್ವಾಗತಿಸಿದರು.

ಸ್ವಚ್ಛ ಮಂಗಳೂರು ಫೌಂಡೇಶನ್ ನ ಅಧ್ಯಕ್ಷ ಉಮನಾಥ ಕೋಟೇಕಾರ್ ವೇದಿಕೆಯಲ್ಲಿ ಉಸ್ಥಿತರಿದ್ದರು. ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕರ ಡಿ. ವೇದವ್ಯಾಸ ಕಾಮತ್ ಸಭೆಯಲ್ಲಿ ಉಪಸ್ಥಿತರಿದ್ದರು.

ಕಲಾಕೃತಿ ತಯಾರಿಸಿದ ವಿಕ್ರಂ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ರಂಜನ್ ಬೆಳ್ಳರ್ಪಾಡಿ ವಂದಿಸಿದರು. ಅಭಿಷೇಕ್ ಶೆಟ್ಟಿ ನಿರೂಪಿಸಿದರು.
ಮಂಗಳೂರು ಮಹಾನಗರದ ಜಾಗೃತ ನಾಗರಿಕರು ಮತ್ತು ಸ್ವಚ್ಚ ಮಂಗಳೂರಿನ ಸ್ವಯಂಸೇವಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು