2:13 PM Tuesday1 - July 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್… Chikkamagaluru | 3 ದಿನಗಳು ಕಳೆದರೂ ನಾಪತ್ತೆಯಾದ ಫಾರೆಸ್ಟ್ ಗಾರ್ಡ್ ಪತ್ತೆ ಇಲ್ಲ:… ಸಿದ್ದರಾಮಯ್ಯರಿಗೆ ಅಂಬೇಡ್ಕರ್ ಸಂವಿಧಾನ ಬೇಕಾ, ಇಂದಿರಾ ಗಾಂಧಿ ಸಂವಿಧಾನ ಬೇಕಾ: ಬಸವರಾಜ ಬೊಮ್ಮಾಯಿ… Mandya | ಕಾವೇರಿ ಜಲಾಯನ ಪ್ರದೇಶದಲ್ಲಿ ವ್ಯಾಪಕ ಮಳೆ: ಹ ಕೆಆರ್ ಎಸ್…

ಇತ್ತೀಚಿನ ಸುದ್ದಿ

ನಾನೇ ಗುದ್ದಲಿ ಪೂಜೆ ಮಾಡಿದ ಪ್ರಜಾಸೌಧ ಕಟ್ಟಡವನ್ನು ನಾನೇ ಉದ್ಘಾಟಿಸಿದ್ದೇನೆ: ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಫುಲ್ ಖುಷ್

16/05/2025, 20:12

*ದಕ್ಷಿಣ ಕನ್ನಡ ಜಿಲ್ಲೆ ಸದ್ಯದಲ್ಲೇ ಪೋಡಿಮುಕ್ತ ಜಿಲ್ಲೆ ಆಗಲಿದೆ: ಸಿ.ಎಂ.ಸಿದ್ದರಾಮಯ್ಯ*

*ಸಚಿವ ಕಥಷ್ಣಬೈರೇಗೌಡರ ವಿಶೇಷ ಕಾಳಜಿ, ಸಾಕಷ್ಟು ಶ್ರಮದಿಂದ ಜಿಲ್ಲೆ ಪೋಡಿ ಮುಕ್ತ ಆಗುತ್ತಿದೆ: ಸಿ.ಎಂ ಬಹಿರಂಗ ಮೆಚ್ಚುಗೆ*

*ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿದ್ದಾಗ ಪ್ರಜಾಸೌಧ ಉದ್ಘಾಟನೆ ಆಗಲಿಲ್ಲ ಏಕೆ: ವೇದಿಕೆಯಲ್ಲೇ ಶಾಸಕ ವೇದವ್ಯಾಸ ಕಾಮತ್ ಅವರನ್ನು ಪ್ರಶ್ನಿಸಿದ ಸಿಎಂ*

*ಮನುಷ್ಯ ಮನುಷ್ಯನನ್ನು ಪ್ರೀತಿಸುವ ಕೆಲಸವನ್ನು ನಾವು ಮಾಡೋಣ. ನಮ್ಮದು ಸರ್ವ ಜನಾಂಗದ ಶಾಂತಿಯ ತೋಟ: ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*


ಮಂಗಳೂರು(reporterkarnataka.com):
ನಾನೇ ಗುದ್ದಲಿಪೂಜೆ ಮಾಡಿದ ಪ್ರಜಾಸೌಧದ ಕಟ್ಟಡವನ್ನು ನಾನೇ ಉದ್ಘಾಟಿಸಿದ್ದೇನೆ. ಮಾಜಿ ಸಚಿವ ರಮಾನಾಥ ರೈ ಅವರ ಕಾಳಜಿಯಿಂದ ಪ್ರಜಾಸೌಧ ಕಟ್ಟಡಕ್ಕೆ ನಾನೇ ಗುದ್ದಲಿಪೂಜೆ ಮಾಡಿದ್ದೆ. ಈಗ ನಾನೇ ಉದ್ಘಾಟಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಕಂದಾಯ ಇಲಾಖೆ, ನಗರಾಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾಡಳಿತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಗರದ ಪಡೀಲ್ ಬಳಿ ನಿರ್ಮಿಸಿದ
ನೂತನ ಪ್ರಜಾಸೌಧ ಕಟ್ಟಡವನ್ನು ಪ್ರಜಾರ್ಪಣೆಗೊಳಿಸಿ ಮಾತನಾಡಿದರು.








ನಾನು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದಾಗ ಗುದ್ದಲಿ ಪೂಜೆ ನೆರವೇರಿಸಿ ಮೊದಲ ಹಂತದ ಕಾಮಗಾರಿಗೆ ಹಣ ಬಿಡುಗಡೆ ಮಾಡಿದ್ದೆವು. ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿದ್ದಾಗ ಪ್ರಜಾಸೌಧದ ಕೆಲಸ ನಿಂತು ಹೋಗಿತ್ತು. ಬಿಜೆಪಿ ಸರ್ಕಾರದಲ್ಲಿ ಕಾಮಗಾರಿ ಮುಂದುವರೆಯಲೇ ಇಲ್ಲ. ಇದನ್ನು ಪೂರ್ಣಗೊಳಿಸಲು ಮತ್ತೆ ನಾವೇ ಅಧಿಕಾರಕ್ಕೆ ಬರಬೇಕಾಯಿತು. ಬಿಜೆಪಿ ಅವಧಿಯಲ್ಲಿ ಉದ್ಘಾಟನೆ ಆಗಲಿಲ್ಲ ಏಕೆ ಎಂದು ವೇದಿಕೆಯಲ್ಲೇ ಇದ್ದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ವೇದವ್ಯಾಸ ಕಾಮತ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.
ಕೇಂದ್ರ ಸರ್ಕಾರಕ್ಕೆ ರಾಜ್ಯದಿಂದ 4.5 ಲಕ್ಷ ಕೋಟಿ ತೆರಿಗೆ ಕೊಡ್ತೀವಿ. ಕೇಂದ್ರ ರಾಜ್ಯಕ್ಕೆ ವಾಪಾಸ್ ಕೊಡುವುದು, ಸ್ಮಾರ್ಟ್ ಸಿಟಿ ಯೋಜನೆ ಸೇರಿ ಕೇವಲ 65 ಸಾವಿರ ಕೋಟಿ. ಶೇ15-16 ರಷ್ಟು ಮಾತ್ರ ವಾಪಾಸ್ ಕೊಡುತ್ತಿದೆ. ಇದು ಕೇಂದ್ರ ನಮ್ಮ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯ ಅಲ್ಲವೇ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು , ಪ್ರಧಾನಿ ಮೋದಿಯವರಿಗೆ ಹೇಳಿ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯ ನಿಲ್ಲಿಸಿ ಎಂದು ಶಾಸಕ ಕಾಮತ್ ಅವರಿಗೆ ಕಿವಿ ಮಾತು ಹೇಳಿದರು.

*ದಕ್ಷಿಣ ಕನ್ನಡ ಸದ್ಯದಲ್ಲೇ ಪೋಡಿಮುಕ್ತ ಜಿಲ್ಲೆ: ಸಿಎಂ ಘೋಷಣೆ:*
ದಕ್ಷಿಣ ಕನ್ನಡ ಜಿಲ್ಲೆ ಸದ್ಯದಲ್ಲೇ ಪೋಡಿಮುಕ್ತ ಜಿಲ್ಲೆ ಆಗಲಿದೆ.‌ ಸಚಿವ ಕೃಷ್ಣಬೈರೇಗೌಡರು ವಿಶೇಷ ಕಾಳಜಿ, ಸಾಕಷ್ಟು ಶ್ರಮ ವಹಿಸಿ ಜಿಲ್ಲೆಯನ್ನು ಪೋಡಿಮುಕ್ತ ಮಾಡುವ ದಿಕ್ಕಿನಲ್ಲಿ ಕೆಲಸಗಳು ಆಗಿವೆ ಎಂದು ಶ್ಲಾಘಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.‌

*ಮನುಷ್ಯರು ಪರಸ್ಪರ ಪ್ರೀತಿಸುವ ಸಮಾಜವನ್ನು ಗಟ್ಟಿಗೊಳಿಸೋಣ: ಸಿಎಂ ಕರೆ*
ನಮ್ಮದು ಸರ್ವ ಜನಾಂಗದ ಶಾಂತಿಯ ತೋಟ. ಮನುಷ್ಯರು ಮನುಷ್ಯರನ್ನು ಪ್ರೀತಿಸುವ ಸರ್ವ ಜನಾಂಗದ ಶಾಂತಿಯ ತೋಟ ನಮ್ಮದು‌. ಈ ಸಮಾಜವನ್ನು ನಾವು ಇನ್ನಷ್ಟು ಗಟ್ಟಿಗೊಳಿಸೋಣ. ಜೊತೆಗೆ ಅಸಮಾನತೆಯ ಸಮಾಜವನ್ನು ಸುಧಾರಿಸಿ ಸಾಮಾಜಿಕ ನ್ಯಾಯದ ದಿಕ್ಕಿನಲ್ಲಿ ಸಮಾಜ ಕಟ್ಟೋಣ ಎಂದು ಕರೆ ನೀಡಿದರು.
ಅತ್ಯಂತ ಪ್ರಜ್ಞಾವಂತರೇ ಇರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಗಲಭೆಗಳು ನಡೆಯಬಾರದು ಎಂದರು.‌

*ನುಡಿದಂತೆ ನಡೆದಿದ್ದೇವೆ…ಹೇಳಿದ್ದನ್ನು ಮಾಡಿದ್ದೇವೆ:*
ನಾವು ನುಡಿದಂತೆ ನಡೆದಿದ್ದೇವೆ. ಜಿಲ್ಲೆಗೊಂದು ಮೆಡಿಕಲ್ ಕಾಲೇಜು ಕೊಡುವ ಭರವಸೆ ನೀಡಿದ್ದೆವು. ಅದರಂತೆ ಪುತ್ತೂರಿಗೂ ಮೆಡಿಕಲ್ ಕಾಲೇಜು ಕೊಟ್ಟಿದ್ದೇವೆ. ಸದ್ಯ 250 ಬೆಡ್ ಗಳ ಆಸ್ಪತ್ರೆ ಮಾಡ್ತೀವಿ. ಆಮೇಲೆ ಮತ್ತೆ 250 ಬೆಡ್ ಗಳನ್ನು ವಿಸ್ತರಿಸುತ್ತೇವೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು