ಇತ್ತೀಚಿನ ಸುದ್ದಿ
ಐ ಸ್ಟ್ಯಾಂಡ್ ವಿತ್ ಸತೀಶ ಜಾರಕಿಹೊಳಿ: ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ
15/11/2022, 20:03

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com
ಕೆಪಿಸಿಸಿ ಕಾರ್ಯಾಧ್ಯಕ್ಷ,ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ತೇಜೋವಧೆ ಮಾಡುತ್ತಿರುವುದನ್ನು ಖಂಡಿಸಿ ವಿವಿಧ ದಲಿತಪರ ಸಂಘಟನೆಗಳ ಕಾರ್ಯಕರ್ತರು ನಗರದ ಸಿಪಿಎಡ್ ಮೈದಾನದಿಂದ ಪ್ರತಿಭಟನೆ ನಡೆಸಿ ಚನ್ನಮ್ಮ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಇದಕ್ಕೂ ಮೊದಲು ಸುಮಾರು 2500ಕ್ಕೂ ಹೆಚ್ಚು ಕಾರ್ಯಕರ್ತರು ಸಿಪಿಎಡ್ ಮೈದಾನದಿಂದ ಪಾದಯಾತ್ರೆ ಮೂಲಕ ಶಾಸಕ ಸತೀಶ್ ಜಾರಕಿಹೊಳಿ ಬೆಂಬಲಿಸಿ ಪ್ರತಿಭಟನಾ ರ‍್ಯಾಲಿ ನಡೆಸಿದರು.
ಈ ವೇಳೆ ಶಾಸಕ ಸತೀಶ್ ಜಾರಕಿಹೊಳಿ ಭಾವಚಿತ್ರ ಕೈಯಲ್ಲಿ ಹಿಡಿದು ಅವರ ಪರ ಘೋಷಣೆ ಕೂಗಿ ಐ ಸ್ಟ್ಯಾಂಡ್ ವಿಥ್ ಸತೀಶ್ ಜಾರಕಿಹೊಳಿ ಎಂಬ ಬರಹದ ಬಿತ್ತಿ ಪತ್ರ ಹಿಡಿದು ಪ್ರತಿಭಟನೆ ನಡೆಸಿದರು.
ಇದೇ ವೇಳೆ ವಿವಿಧ ದಲಿತಪರ ಸಂಘಟನೆಗಳ ಕಾರ್ಯಕರ್ತರು ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಬೆಂಬಲ ವ್ಯಕ್ತಪಡಿಸಿದರು. ಈ ಪ್ರತಿಭಟನೆಯಲ್ಲಿ ವಿವಿಧ ದಲಿತಪರ ಸಂಘಟನೆಗಳ 2500ಕ್ಕೂ ಹೆಚ್ಚುಕಾರ್ಯಕರ್ತರು ಭಾಗವಹಿಸಿದ್ದರು.