10:33 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಐ ಸ್ಟ್ಯಾಂಡ್ ವಿತ್ ಸತೀಶ ಜಾರಕಿಹೊಳಿ: ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

15/11/2022, 20:03

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕೆಪಿಸಿಸಿ ಕಾರ್ಯಾಧ್ಯಕ್ಷ,ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ತೇಜೋವಧೆ ಮಾಡುತ್ತಿರುವುದನ್ನು ಖಂಡಿಸಿ ವಿವಿಧ ದಲಿತಪರ ಸಂಘಟನೆಗಳ ಕಾರ್ಯಕರ್ತರು ನಗರದ ಸಿಪಿಎಡ್ ಮೈದಾನದಿಂದ ಪ್ರತಿಭಟನೆ‌ ‌ನಡೆಸಿ ಚನ್ನಮ್ಮ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.


ಇದಕ್ಕೂ ಮೊದಲು ಸುಮಾರು 2500ಕ್ಕೂ ಹೆಚ್ಚು ಕಾರ್ಯಕರ್ತರು ಸಿಪಿಎಡ್ ಮೈದಾನದಿಂದ ಪಾದಯಾತ್ರೆ ಮೂಲಕ ಶಾಸಕ ಸತೀಶ್ ಜಾರಕಿಹೊಳಿ ಬೆಂಬಲಿಸಿ ಪ್ರತಿಭಟನಾ ರ‍್ಯಾಲಿ ನಡೆಸಿದರು.
ಈ ವೇಳೆ ಶಾಸಕ ಸತೀಶ್ ಜಾರಕಿಹೊಳಿ ಭಾವಚಿತ್ರ ಕೈಯಲ್ಲಿ ಹಿಡಿದು ಅವರ ಪರ ಘೋಷಣೆ ಕೂಗಿ ಐ ಸ್ಟ್ಯಾಂಡ್ ವಿಥ್ ಸತೀಶ್ ಜಾರಕಿಹೊಳಿ ಎಂಬ ಬರಹದ ಬಿತ್ತಿ ಪತ್ರ ಹಿಡಿದು ಪ್ರತಿಭಟನೆ ನಡೆಸಿದರು.

ಇದೇ ವೇಳೆ ವಿವಿಧ ದಲಿತಪರ ಸಂಘಟನೆಗಳ ಕಾರ್ಯಕರ್ತರು ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಬೆಂಬಲ ವ್ಯಕ್ತಪಡಿಸಿದರು. ಈ ಪ್ರತಿಭಟನೆಯಲ್ಲಿ ವಿವಿಧ ದಲಿತಪರ ಸಂಘಟನೆಗಳ 2500ಕ್ಕೂ ಹೆಚ್ಚುಕಾರ್ಯಕರ್ತರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು