ಇತ್ತೀಚಿನ ಸುದ್ದಿ
ಕರೆದರೆ ಮಾತ್ರ ದೆಹಲಿಗೆ ಹೋಗುವೆ: ಮಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ
03/12/2025, 16:47
ಮಂಗಳೂರು(reporterkarnataka.com): ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ. ಕರೆದರೆ ಮಾತ್ರ ದೆಹಲಿಗೆ ಹೋಗುವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಅವರು ಇಂದು ಇಂದು ಶಿವಗಿರಿ ಮಠ ವರ್ಕಲಾ ಶ್ರೀ ನಾರಾಯಣ ಗುರು ಅಧ್ಯಯನ ಪೀಠ ಮಂಗಳೂರು ವಿಶ್ವ ವಿದ್ಯಾಲಯ ಆಶ್ರಯದಲ್ಲಿ ಮಂಗಳೂರಿನ ಕೊಣಾಜೆ ಯ ಮಂಗಳ ಗಂಗೋತ್ರಿಯಲ್ಲಿ ಆಯೋಜಿಸಲಾಗಿದ್ದ ಶತಮಾನದ ಪ್ರಸ್ತಾನ ಶ್ರೀ ನಾರಾಯಣ ಗುರು ಮತ್ತು ಮಹಾತ್ಮಾ ಗಾಂಧೀ ಐತಿಹಾಸಿಕ ಸಂವಾದ ಶತಮಾನೋತ್ಸವ, ಶ್ರೀ ಗುರುವಿನ ಮಹಾಸಮಾಧಿ ಶತಾಬ್ದಿ ಸರ್ವಮತ ಸಮ್ಮೇಳನ ಶತಮಾನೋತ್ಸವ, ಯತಿ ಪೂಜೆ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು.
ಇದೇ ವೇಳೆ ಅವರು ವೇಣುಗೋಪಾಲ್ ಅವರೊಂದಿಗೆ ಕಾಣಿಸಿಕೊಂಡ ಬಗ್ಗೆ ಮಾಧ್ಯಮಗಳ ವರದಿಗಳ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದರು, ಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕರೆದರೆ ಮಾತ್ರ ದೆಹಲಿಗೆ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ಹೋಗುವುದಕ್ಕೆ ಯಾರೂ ಬೇಡ ಅಂದಿಲ್ಲ. ನೀವು ದೆಹಲಿಗೆ ಹೋಗುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ನಾನು ಹೋಗುವುದಿಲ್ಲ. ನನ್ನನು ಕರೆದರೆ ಮಾತ್ರ ದೆಹಲಿಗೆ ತೆರಳುವೆ ಎಂದರು.












