4:35 PM Monday23 - March 2026
ಬ್ರೇಕಿಂಗ್ ನ್ಯೂಸ್
ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್

ಇತ್ತೀಚಿನ ಸುದ್ದಿ

ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ

02/10/2025, 13:54

ಗಿರಿಧರ್ ಕೊಂಪುಳಿರ ಮೈಸೂರು

info.reporterkarnata@gmail.com

ಸಂವಿಧಾನದ ಬಗ್ಗೆ ಅರಿವಿಲ್ಲದವರೇ ದಸರಾ ಉದ್ಘಾಟಿಸುವವರ ಬಗ್ಗೆ ವಿರೋಧವನ್ನು ವ್ಯಕ್ತಪಡಿಸಿದವರಿಗೆ ಸುಪ್ರೀಂ ಕೋರ್ಟ್ ನಲ್ಲಿಯೂ ಛೀಮಾರಿ ಹಾಕಲಾಯಿತು. ದಸರಾ ಉತ್ಸವ ರಾಜಕೀಯದ ವಿಷಯವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಮೈಸೂರು ದಸರಾಕ್ಕೆ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸಲಿದ್ದಾರೆ. ದಸರಾದಲ್ಲಿ ಏರ್ ಶೋ, ದೀಪಾಲಂಕಾರ, ಡ್ರೋನ್ ಶೋ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜನಪ್ರಿಯವಾಗಿದೆ. ಜನರು ಸಂತಸದಿಂದ ಪಾಲ್ಗೊಳ್ಳುವುದೇ ದಸರಾ ಉತ್ಸವ. ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ, ವಸ್ತು ಪ್ರದರ್ಶನ ಪ್ರಾಧಿಕಾರ ಈಗಾಗಲೇ ಅಸ್ತಿತ್ವದಲ್ಲಿರುವುದರಿಂದ ದಸರಾ ಪ್ರಾಧಿಕಾರದ ಅವಶ್ಯಕತೆ ಇಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದರು.

ದಸರಾ ಉದ್ಘಾಟಕರ ಬಗ್ಗೆ ಬಿಜೆಪಿಯವರು ವಿರೋಧದ ಧ್ವನಿಯೆತ್ತಿದ್ದರು. ಕರ್ನಾಟಕ ಜಾತ್ಯಾತೀತ ರಾಜ್ಯವಾಗಿದ್ದು, ಸಂವಿಧಾನದ ಬಗ್ಗೆ ಅರಿವಿಲ್ಲದವರೇ ಇಂತಹ ವಿರೋಧವನ್ನು ವ್ಯಕ್ತಪಡಿಸುತ್ತಾರೆ. ಆದ್ದರಿಂದ ಸುಪ್ರೀಂ ಕೋರ್ಟ್ ನಲ್ಲಿಯೂ ಕೂಡ ವಿರೋಧಕ್ಕೆ ಛೀಮಾರಿಯಾಯಿತು.ದಸರಾ ಉತ್ಸವ ರಾಜಕೀಯದ ವಿಷಯವಲ್ಲ ಎಂದರು.

ದಸರಾ ಉದ್ಘಾಟನೆ ಬಗ್ಗೆ ಜನರ ಪ್ರತಿಕ್ರಿಯೆ ಹೇಗಿತ್ತು ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ವರ್ಷಕ್ಕೊಮ್ಮೆ ನಡೆಯುವ ದಸರಾ ಉತ್ಸವದಲ್ಲಿ ಸಾರ್ವಜನಿಕರು, ವ್ಯಾಪಾರಸ್ಥರು ಸಂತೋಷದಿಂದ ಭಾಗವಹಿಸಿ ಸಂತಸ ವ್ಯಕ್ತಪಡಿಸಿದ್ದಾರೆ ಎಂದರು.

ದಸರಾವೇಳೆಗೆ ಮುಖ್ಯಮಂತ್ರಿಗಳು ಪುಷ್ಪಾರ್ಚನೆ ಮಾಡುವುದಿಲ್ಲ ಎಂದು ವಿಪಕ್ಷಗಳು ಭವಿಷ್ಯ ನುಡಿದಿದ್ದ ಬಗ್ಗೆ ಪ್ರತಿಕ್ರಿಯೆ ನೀಡಿ, ವಿರೋಧಪಕ್ಷಗಳು ಭವಿಷ್ಯಕಾರರಲ್ಲ. ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ. ಆದರೆ ಪಕ್ಷದ ವರಿಷ್ಠರ ಆದೇಶದಂತೆ ಎಲ್ಲರೂ ನಡೆಯಬೇಕಿದೆ. ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಉತ್ಸವದಲ್ಲಿ ಪುಷ್ಪಾರ್ಚನೆ ಮಾಡುತ್ತೇನೆಂಬ ಭರವಸೆ ಇದೆ. ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಲು , ಬಜೆಟ್ ಮಂಡಿಸಲು ಸಾಧ್ಯವಿಲ್ಲ ವೆಂದಿದ್ದರು. ಆದರೂ ನಾನೇ ಎರಡನೇ ಬಾರಿಗೂ ಮುಖ್ಯಮಂತ್ರಿಯಾಗಿ ಮುಂದುವರೆದು ಬಜೆಟ್ ಮಂಡಿಸಿದ್ದೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು