11:25 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಇಬ್ಬರು ಬೇಟೆಗಾರರ ಬಂಧನ: ಮಹಾರಾಷ್ಟ್ರದಲ್ಲಿ ಮಾರಾಟಕ್ಕೆ ಯತ್ನಿಸಿದ 3 ಜೀವಂತ ಕಾಡು ಹಂದಿ ವಶಕ್ಕೆ

12/10/2022, 09:57

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಬಾಳಿಗೇರಿ ಗ್ರಾಮದ ಹೊರವಲಯದಲ್ಲಿ ಕಾಡು ಹಂದಿ ಬೇಟೆಯಾಡುತ್ತಿದ್ದ ಇಬ್ಬರನ್ನು ಬೆಳಗಾವಿ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದವರು ಭಾನುವಾರ ಬಂಧಿಸಿ, ಮೂರು ಜೀವಂತ ಕಾಡುಹಂದಿ, ಹಗ್ಗ ಹಾಗೂ ವಿವಿಧ ಸಾಮಗ್ರಿ ವಶಪಡಿಸಿಕೊಂಡಿದ್ದಾರೆ.
ರಡೇರಹಟ್ಟಿ ಗ್ರಾಮದ ಸದಾಶಿವ ಬಸವಂತ ಕಾಂಬಳೆ (27) ಹಾಗೂ ಅಥಣಿ ಗವಿಸಿದ್ದನಮಡ್ಡಿಯ ನಿವಾಸಿ ಶಿವಾಜಿ ಅಶೋಕ ಭಜಂತ್ರಿ (35) ಬಂಧಿತ ಆರೋಪಿಗಳು, ಕಾಡುಹಂದಿ ಮಾಂಸವನ್ನು ಅಥಣಿ, ಜಮಖಂಡಿ ಸೇರಿ ಮಹಾರಾಷ್ಟ್ರದ ಮಿರಜ, ಸಾಂಗಲಿ ನಗರಗಳಲ್ಲಿ ಮಾರಾಟ ಮಾಡುತ್ತಿದ್ದರು.

ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗಾವಿ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪಿಎಸ್‌ಐ ರೋಹಿಣಿ ಪಾಟೀಲ, ಸಿಬ್ಬಂದಿ ಶಿವಾನಂದ ಅರಬೆಂಚಿ, ಮಾರುತಿ ನಾಯಕ, ಕೆ.ಬಿ.ಕಂಠಿ, ಎನ್.ಎಸ್.ನಾಯಕ, ಎಸ್.ಎಸ್.ರೆಡ್ಡಿ ಹಾಗೂ ಉಮೇಶ ಪಟ್ಟೇದ ಕಾರ್ಯಾಚರಣೆಯಲ್ಲಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು