7:10 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಇಬ್ಬರು ಹಿರಿಯ ಕಾಯಕ ಯೋಗಿಗಳಿಗೆ ಕದಿಕೆ ಟ್ರಸ್ಟ್ ನ ಅತ್ಯುನ್ನತ ‘ನೇಕಾರ ರತ್ನ’ ಪ್ರಶಸ್ತಿ

06/08/2024, 20:39

ಮಂಗಳೂರು(reporterkarnataka.com): ಕದಿಕೆ ಟ್ರಸ್ಟ್ , ಕೈಮಗ್ಗ ನೇಕಾರರಿಗೆ ಕೊಡ ಮಾಡುವ,ಪ್ರತಿಷ್ಟಿತ “ನೇಕಾರ ರತ್ನ ” ಪ್ರಶಸ್ತಿಗೆ ಸಂಜೀವ ಶೆಟ್ಟಿಗಾರ್ ಹಾಗೂ ಸೋಮಪ್ಪ ಜತ್ತನ್ನ ಆಯ್ಕೆಯಾಗಿದ್ದಾರೆ.
86 ವರ್ಷದ ಸಂಜೀವ ಶೆಟ್ಟಿಗಾರ್( ಅಧ್ಯಕ್ಷರು, ಶಿವಳ್ಳಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘ) ಮತ್ತು 87ರ ಹರೆಯದ ಸೋಮಪ್ಪ ಜತ್ತನ್ನ (ನಿರ್ದೇಶಕರು , ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರ ಸಂಘ) ಅವರು ತಮ್ಮ ಜೀವಮಾನದ ಸಾಧನೆಗಾಗಿ ಪ್ರಶಸ್ತಿ ಪಡೆಯಲಿದ್ದಾರೆ. ಇವರಿಬ್ಬರು ಅವಿಭಜಿತ ದ. ಕ. ಜಿಲ್ಲೆಯ ಅತ್ಯಂತ ಹಿರಿಯ ಸಕ್ರಿಯ ನೇಕಾರರು. ಸಂಜೀವ ಶೆಟ್ಟಿಗಾರ್ ಅವರು ಸುಮಾರು 74 ವರ್ಷಗಳಿಂದ ನಿರಂತರ ನೇಯ್ಗೆ ಮಾಡುತ್ತಿರುವುದು ಒಂದು ದಾಖಲೆ ಆಗಿದೆ. ಸೋಮಪ್ಪ ಜತ್ತನ್ನ ಅವರು ಕಳೆದ 66 ವರುಷಗಳಿಂದ ನೇಕಾರಿಕೆಯ ಕಾಯಕದಲ್ಲಿ ನಿರತರಾಗಿದ್ದಾರೆ.
ಸಂಜೀವ ಶೆಟ್ಟಿಗಾರ್ ಈಗ ಅಳಿದು ಹೋದ ಮುತ್ತು ಬಾರ್ಡರ್ ನೇಯ್ಗೆ ಯನ್ನು 2019 ರವರೆಗೆ ನೇಯುತ್ತಿದ್ದರು . ಈಗಲೂ ತಮ್ಮದೇ ವಿನ್ಯಾಸದ ಸೆರಗಿನಲ್ಲಿ ಬುಟ್ಟಾ ಇರುವ 60 ಕೌಂಟ್ ಸೀರೆಗಳನ್ನು ನೇಯುವುದರ ಜೊತೆಗೆ ಅನೇಕ ನೇಕಾರರಿಗೆ ಹಾಸು ಮತ್ತು ವಿನ್ಯಾಸ ಮಾಡುವ ಕೆಲಸ ಮಾಡುತ್ತಾ ಸಕ್ರಿಯರಾಗಿದ್ದಾರೆ. ನೇಕಾರರ ಸಂಘದ ಕಾರ್ಯ ಚಟುವಟಿಗಳನ್ನು ಅತ್ಯಂತ ದಕ್ಷತೆಯಿಂದ ನಿರ್ವಹಣೆ ಮಾಡುತ್ತಿದ್ದಾರೆ.
ಸೋಮಪ್ಪ ಜತ್ತನ್ನ ಅವರು 60 ಕೌಂಟ್ ನ ಸಣ್ಣ ಚೌಕುಳಿ ವಿನ್ಯಾಸದ ಅಪೂರ್ವ ಕಟ್ ಬಾರ್ಡರ್ ಉಡುಪಿ ಸೀರೆಗಳನ್ನು ನೇಯುತ್ತಿದ್ದಾರೆ.
ಈ ಹಿರಿಯ ಕಾಯಕ ಯೋಗಿಗಳು ಪರಿಸರ ಸ್ನೇಹಿ ಉಡುಪಿ ಸೀರೆ ನೇಕಾರಿಕೆಗೆ ನೀಡಿದ ಕೊಡುಗೆಗಾಗಿ ಪ್ರಶಸ್ತಿಯನ್ನು ನೀಡಲಾಗುತ್ತದೆ.
ಅಳಿವಿನಂಚಿಗೆ ತಲುಪಿದ್ದ ಉಡುಪಿ ಸೀರೆ ನೇಕಾರಿಕೆ ಈಗ ಕದಿಕೆ ಟ್ರಸ್ಟ್ ನ ಪ್ರಯತ್ನದಿಂದ ಪುನಃಶ್ಚೇತನಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು